ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಿಗೆ ಪಡೆಯಲು ಸೂಚನೆ

ddddddddd
Published on



ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ನಗರದಲ್ಲಿ ರೇಬಿಸ್‌ಹರಡುವ ಸಂಭವ ಹೆಚ್ಚಾಗಿರುತ್ತದೆ. ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ನಗರದಲ್ಲಿ ಸಾಕು ನಾಯಿಗಳಿಗೆ ಪರವಾನಿಗೆ ಪಡೆಯುವಂತೆ ಸೂಚಿಸಿದೆ.
ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಿಗೆ ಪಡೆಯಲು ಅರ್ಜಿ ಪ್ರತಿ ಪಡೆದುಕೊಳ್ಳಬೇಕು. ಸಾಕು ನಾಯಿಗೆ ನೀಡಲಾಗಿರುವ ಲಸಿಕಾ ದಾಖಲೆ, ಮಾಲೀಕರ ಆಧಾರ್ ಕಾರ್ಡ್, ನೆರೆಹೊರೆಯವರಿಂದ ನಿರಾಕ್ಷೇಪಣಾ ಪತ್ರ, ಸಾಕು ನಾಯಿಯ 2 ಭಾವಚಿತ್ರ ಇತ್ಯಾದಿ ದಾಖಲೆಗಳನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು. ಸಾಕು ಪ್ರಾಣಿಗಳು ಮತ್ತು ಮರಿಗಳನ್ನು ರಸ್ತೆಯ ಬದಿಗಳಲ್ಲಿ ಬಿಡುವುದು ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವುದು ಕಂಡುಬಂದಲ್ಲಿ ಸಾಕು ಪ್ರಾಣಿಗಳ ಮಾಲೀಕರ ವಿರುದ್ಧ ಪಾಲಿಕೆಯು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಮನಪಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net