ಬದುಕು ಕಟ್ಟಿಕೊಳ್ಳಲು ಸೌಲಭ್ಯ ಕೊಡಿ: ಮಂಡ್ಯದಲ್ಲಿ ಗೃಹಕಾರ್ಮಿಕರ ಪ್ರತಿಭಟನೆ

Domestic workers protest Mandya
oppo_0
Published on

ಮಂಡ್ಯ: ಪಿಎಫ್, ಇಎಸ್‌ಐ, ಪಿಂಚಣಿ, ವೈದ್ಯಕೀಯ ವಿಮೆ, ಮಾತೃತ್ವ ಸೌಲಭ್ಯ ಹಾಗೂ ವಿದ್ಯಾರ್ಥಿ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿಸಿ ಕಚೇರಿ ಎದುರು ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ, ಕರ್ನಾಟಕ ಗೃಹ ಕಾರ್ಮಿಕರ ಚಳವಳಿ, ಕೊನ್‌ಫೆಡರೇಷನ್ ಆಫ್ ಫ್ರೀ ಟ್ರೇಡ್ ಯೂನಿಯನ್ಸ್ ಆಫ್ ಇಂಡಿಯಾ ನೇತೃತ್ವದಲ್ಲಿ ಗೃಹ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಗೃಹ ಕಾರ್ಮಿಕರು ಸಮಾಜದಲ್ಲಿ ತುಳಿತಕ್ಕೆ ಒಳಗಾಗಿದ್ದಾರೆ. ಸಾಮಾಜಿಕ ಭದ್ರತೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಗೃಹ ಕಾರ್ಮಿಕರು ವಲಸೆ ಬಂದಿರುವವರೇ ಹೆಚ್ಚು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಆದ್ದರಿಂದ ಕೆಲ ಸೌಲಭ್ಯವನ್ನು ಕಲ್ಪಿಸಿಕೊಡುವುದರ ಮೂಲಕ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಸಹಕರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಶೋಭಾ, ಲಲಿತಾ, ನಾಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net