ಜೀವ ಉಳಿಸಲು ಅಂಗಾಂಗ ದಾನ ಮಾಡಿ

ಅಂಗಾಂಗದಾನ ಕಾರ್ಯಕ್ರಮ (4)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಯಾವುದೇ ವಯಸ್ಸು ಅಥವಾ ಲಿಂಗ ಬೇಧವಿಲ್ಲದೆ ಅಂಗಾಂಗ ಮತ್ತು ಅಂಗಾಂಶ ದಾನ ಮಾಡಬಹುದು ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎನ್​. ಅಗಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ಆರ್​.ಎನ್​. ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂಗಾಂಗ ದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಬ್ಬ ದಾನಿಯು ಕಿಡ್ನಿ, ಲಿವರ್​, ಹೃದಯ, ಮೆದೋಜಿರಕ ಗ್ರಂಥಿ, ಸಣ್ಣ ಕರಳು ಸೇರಿ ದೇಹದ ಹಲವು ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅಂಗಾಂಗ ದಾನ ಮಾಡಿ ಜೀವ ಉಳಿಸಿ ಎಂದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಕೆ. ಚವ್ಹಾಣ ಮಾತನಾಡಿ, ಅಂಗಾಂಗದಾನ ಮಾಡಲು ಹೇಗೆ ನೋಂದಣಿ ಮಾಡಿಕೊಳ್ಳಬೇಕು ಎಂಬುದನ್ನು ತಿಳಿಸಿದರು.
ರೇಖಾ ಬಾಡಗಿ ಡೆಂಘೆ, ಚಿಕೂನಗುನ್ಯಾ ರೋಗಗಳು ಹರಡುವ ಬಗೆ, ರೋಗದ ಲಕ್ಷಣಗಳು ಹಾಗೂ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿಸಿದರು.
ಉಪನ್ಯಾಸಕ ರಾಜಕುಮಾರ ಭಜಂತ್ರಿ, ಆರೋಗ್ಯ ಇಲಾಖೆ ಸಿಬ್ಬಂದಿ, ಉಪನ್ಯಾಸಕರು, ವಿದ್ಯಾರ್ಥಿಗಳು, ಇತರರು ಇದ್ದರು.
ಡಾ. ಶೇಖರ ಸಜ್ಜನ್​ ಸ್ವಾಗತಿಸಿದರು. ಡಾ. ಮಂಜುಳಾ ಸವಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಎಸ್​. ಬಣಕಾರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net