ರಕ್ತದಾನ ಮಾಡಿ ಪುಣ್ಯದ ಕಾರ್ಯದಲ್ಲಿ ಭಾಗಿಯಾಗಿ

12DND- bolld
Published on

ದಾಂಡೇಲಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ಯುವ ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟಿ ಹಳಿಯಾಳ, ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ, ರಕ್ತ ಭಂಡಾರ ಕೇಂದ್ರ, ನವನಗರ ಹುಬ್ಬಳಿ ಸಾರ್ವಜನಿಕ ಆಸ್ಪತ್ರೆ ದಾಂಡೇಲಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬುಧವಾರ ನಡೆಯಿತು. ಶಿಬಿರದಲ್ಲಿ ಒಟ್ಟು 50 ಯುನಿಟ್ ರಕ್ತ ಸಂಗ್ರಹಿಸಲಾಯಿತು.


ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‌ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ಶಿಬಿರ ಉದ್ಘಾಟಿಸಿ ಮಾತನಾಡಿ, ದಾನ ಎಂಬ ಶಬ್ದ ತನ್ನದೇ ಆದ ಮಹತ್ವ ಪಡೆದಿದೆ. ಇದೊಂದು ಪುಣ್ಯದ ಕೆಲಸ. ಮರಣದ ಕ್ಷಣದಲ್ಲಿ ಹೋರಾಡುವ ವ್ಯಕ್ತಿಗೆ ರಕ್ತದಾನ ಮಾಡುವುದರಿಂದ ಪುಣ್ಯದ ಕೆಲಸದಲ್ಲಿ ಪಾಲ್ಗೊಳ್ಳುವಂತಾಗುತ್ತದೆ ಎಂದರು.


ಪ್ರಾಚಾರ್ಯ ಡಾ. ಎಂ.ಡಿ. ಒಕ್ಕುಂದ ಅಧ್ಯಕ್ಷತೆ ವಹಿಸಿದ್ದರು.


ಹುಬ್ಬಳ್ಳಿಯ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಹಾಗೂ ರಕ್ತ ಭಂಡಾರ ಕೇಂದ್ರ ವೈದ್ಯಾಧಿಕಾರಿ ಉಮೇಶ ಹಳ್ಳಿಕೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೆಣ್ಣು ಮಕ್ಕಳು ರಕ್ತದಾನಕ್ಕೆ ಮುಂದೆ ಬರುತ್ತಿರುವುದು ಮೆಚ್ಚುವ ಸಂಗತಿ ಎಂದರು.


ಅತಿಥಿಗಳಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಅನಿಲಕುಮಾರ, ಸಾರ್ವಜನಿಕ ಆಸ್ಪತ್ರೆ ಹಿರಿಯ ವೈದ್ಯರಾದ ರಾಜೇಶಪ್ರಸಾದ, ಡಾ. ಮಂಜುನಾಥ ಜಿ ಛಲವಾದಿ, ಡಾ. ಬಿ.ಎನ್. ಅಕ್ಕಿ, ಡಾ. ನಾಸೀರಅಹ್ಮದ್ ಜಂಗೂಬಾಯಿ, ತಸ್ಲೀಮಾ ಜೋರುಮ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net