

ಶಿರಾ: ದಾನಗಳಲ್ಲಿಯೇ ರಕ್ತದಾನ ಶ್ರೇಷ್ಠ. ತುರ್ತು ಸಂದರ್ಭದಲ್ಲಿ ಸಿಗುವ ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್.ಎಂ.ಗೌಡ ತಿಳಿಸಿದರು.
ಶಿರಾ ನಗರದ ಸೇವಾ ಸದನದಲ್ಲಿ ಬಿಜೆಪಿ ಮಧುಗಿರಿ ಸಂಟನಾತ್ಮಕ ಜಿಲ್ಲೆಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸೆ.17ರಿಂದ ಅ.2ರ ವರೆಗೆ ಬಿಜೆಪಿ ಸೇವಾ ಪಾಕ್ಷಿಕ ಆಚರಿಸುತ್ತಿದ್ದು, ರಕ್ತದಾನಕ್ಕೆ ಯುವಕರು ಮುಂದಾಗಬೆಕು ಎಂದು ಕರೆ ನೀಡಿದರು.
ಶಿಬಿರದಲ್ಲಿ ಸುವಾರು 75ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನೋತ್ಸವ ಆಚರಿಸಿದರು.
ಎಸ್.ಟಿ.ಮೋರ್ಚಾ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ನಾಗರಾಜ್‌ಗೌಡ, ಬಪ್ಪರಾಯಪ್ಪ, ರೈತ ಮೋರ್ಚಾ ಅಧ್ಯಕ್ಷ ಮದ್ದೆವಳ್ಳಿ ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಹನುಮಂತ ನಾಯ್ಕ, ನಗರಸಭೆ ಮಾಜಿ ಸದಸ್ಯ ಸಂತೇಪೇಟೆ ನಟರಾಜ್, ಮಹಿಳಾ ಮೋರ್ಚಾ ಪದ್ಮಾ ಮಂಜುನಾಥ್, ನಾಗರತ್ನಾ ಮತ್ತಿತರರು ಇದ್ದರು.