

ಹಳಿಯಾಳ: ರಕ್ತದಾನ ಶ್ರೇಷ್ಠದಾನವಾಗಿದ್ದು, ರಕ್ತದಾನದಿಂದ ಒಂದು ಜೀವ ಉಳಿಸುವ ಮಹಾ ಪುಣ್ಯದ ಕಾರ್ಯ ಮಾಡಿದಂತಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಬೇಕು ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಮತ್ತು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು.
ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆ ನಿಮಿತ್ತ ಹಳಿಯಾಳ ಬಿಜೆಪಿ ಘಟಕದಿಂದ ಬುಧವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿ ಅವರು ಮಾತನಾಡಿದರು.
ಶಿಬಿರದಲ್ಲಿ 78 ಜನ ರಕ್ತದಾನ ಮಾಡಿದರು. ಬಿಜೆಪಿ ಮಂಡಲದ ಅಧ್ಯಕ್ಷ ವಿಠ್ಠಲ ಸಿದ್ದನ್ನವರ್, ಪ್ರಧಾನ ಕಾರ್ಯದರ್ಶಿ ಸಂತೋಷ ಘಟಕಾಂಬಳೆ, ಪ್ರಮುಖರಾದ ಮಂಗೇಶ ದೇಶಪಾಂಡೆ, ಪ್ರಶಾಂತ ನಾಯಕ, ಉದಯ ಜಾಧವ, ಬಸಣ್ಣ ಕುರುಬಗಟ್ಟಿ, ಶಾಂತಾ ಹಿರೇಕರ, ಸಂಗೀತಾ ಜಾವಳೆಕರ, ಜಯಲಕ್ಷ್ಮೀ ಚವ್ವಾಣ, ರತ್ನಮಾಲಾ ಮುಳೆ ಇತರರಿದ್ದರು.