ಜೀವ ಉಳಿಸಲು ರಕ್ತದಾನ ಮಾಡಿ

20spt1
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಥಾಸ್ತು ಸಾತ್ವಿಕ ಸಂಸ್ಥೆಯ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ದಾನಿಗಳು ರಕ್ತದಾನ ಮಾಡಿದರು.
Published on

ಸೋಮವಾರಪೇಟೆ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ ಮತ್ತು ತಥಾಸ್ತು ಸಾತ್ವಿಕ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರಕ್ತನಿಧಿ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಕರುಂಬಯ್ಯ, ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸುವುದರೊಂದಿಗೆ, ರಕ್ತದಾನಿಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ರಕ್ತಕ್ಕೆ ಪರ್ಯಾಯವಿಲ್ಲದ ಕಾರಣ ಒಮ್ಮೆ ರಕ್ತದಾನ ಮಾಡಿದರೆ, ನಾಲ್ಕು ಜೀವಗಳನ್ನು ಉಳಿಸಬಹುದು. ರಕ್ತದಾನದಿಂದ ದೇಹಕ್ಕೆ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ. ಮಹಿಳೆಯರು, ಬಾಣಂತಿಯರಲ್ಲಿ ರಕ್ತಹೀನತೆ, ಅಪಘಾತಗಳಿಂದ ರಕ್ತಸ್ರಾವ, ಡೆಂಗೆಯಂತಹ ಸಾಂಕ್ರಾಮಿಕ ರೋಗ ಹರಡಿದ ಸಂದರ್ಭ ರಕ್ತ ಅವಶ್ಯಕತೆ ಹೆಚ್ಚಾಗಿದೆ. ಮಡಿಕೇರಿ ರಕ್ತನಿಧಿ ಕೇಂದ್ರದಲ್ಲಿ ಪ್ರತಿದಿನ ರಕ್ತದ ಸಂಗ್ರಹ ಇರಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕಾಗಿದೆ. ಈಗಾಗಲೇ ಕೊಡಗಿನ ಸಂಘ, ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪ್ರಶಂಸಿದರು.

ರಕ್ತದಾನ ಮಹತ್ವದ ಬಗ್ಗೆ ಆಸ್ಪತ್ರೆಯ ತಜ್ಞವೈದ್ಯ ಜಮೀರ್ ಆಹಮ್ಮದ್ ತಿಳಿಸಿದರು.
ತಥಾಸ್ತು ಸಂಸ್ಥೆಯ ಅಧ್ಯಕ್ಷ ಉದಯ್ ಮಾಳವ, ಕಾನೂನು ಸಲಹೆಗಾರರಾದ ಎನ್.ಆರ್.ರೂಪಾ, ಕಾರ್ಯದರ್ಶಿ ಜನಾರ್ದನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net