ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ

4hgr5
ಮಾಜಿ ಶಾಸಕ ಡಾ. ಕೆ. ಅನ್ನದಾನಿ ಮಾತನಾಡುತ್ತಿರುವುದು.
Published on

ಹಲಗೂರು: ಚನ್ನಪಟ್ಟಣ ರಸ್ತೆಯಲ್ಲಿರುವ ಹಲಗೂರು ವಿದ್ಯಾಸಂಸ್ಥೆಯಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಂಡಿರುವ ರಕ್ತದಾನ ಶಿಬಿರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದರ ಮೂಲಕ ಅಮೂಲ್ಯವಾದ ಜೀವಗಳನ್ನು ಉಳಿಸಲು ಸಹಕಾರಿಯಾಗಬೇಕು ಎಂದು ಮಾಜಿ ಶಾಸಕ ಡಾ.ಕೆ ಅನ್ನದಾನಿ ಯುವಕರಿಗೆ ಕರೆ ನೀಡಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಹಲಗೂರು ಹೋಬಳಿಯ ಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ರಕ್ತದಾನ ಶಿಬಿರವನ್ನು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು ಎಂದರು.

ಈ ಸಂದರ್ಭದಲ್ಲಿ ಎಚ್.ಎಮ್.ಆನಂದ್‌ಕುಮಾರ್, ತಮ್ಮಣ್ಣೇಗೌಡ, ಎ.ಟಿ.ಶ್ರೀನಿವಾಸ್, ಎನ್.ಯೋಗೇಶ್, ಜಗದೀಶ, ನಾಗೇಶ್, ಸದಾಶಿವ, ಸುರೇಶ, ಶ್ರೀನಿವಾಸಚಾರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net