ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ

17 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಕ್ತದಾನ ಮಹಾದಾನ. ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸಲು ಮುಂದಾಗಬೇಕು ಎಂದು ವೈದ್ಯ ಡಾ. ಆನಂದ ಪಾಂಡುರಂಗಿ ಹೇಳಿದರು.
ನಗರದ ಕೆಸಿಡಿ ವೃತ್ತದಲ್ಲಿ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ವತಿಯಿಂದ ಸಂಚಾರಿ ರಕ್ತ ಸಂಗ್ರಹ ವಾಹನದಲ್ಲಿ ಮಂಗಳವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಆರೋಗ್ಯಕರ ಜೀವನ ಸಾಗಿಸುವುದು ಮುಖ್ಯವಾಗಿದೆ. ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರು ಉತ್ಪತ್ತಿ ಸಾಮರ್ಥ್ಯ ವೃದ್ಧಿಸುತ್ತದೆ. ಪ್ರತಿ ಮಂಗಳವಾರ ಕೆಸಿಡಿ ವೃತ್ತದಲ್ಲಿ ಈ ಶಿಬಿರ ನಡೆಯಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು.
ದತ್ತಮೂರ್ತಿ ಕುಲಕರ್ಣಿ, ಸುಧೀಂದ್ರ ದೇಶಪಾಂಡೆ, ವಿಜಯಾನಂದ ಶೆಟ್ಟಿ, ಸುರೇಶ ಬೇದರೆ, ಮೋಹನ ರಾಮದುರ್ಗ, ಸಿದ್ದು ಅಂಗಡಿ, ವಿನೋದ ಕುಮಾರ, ಕಿರಣ ಗುಡ್ಡದ, ನರೇಂದ್ರ ಕುಲಕರ್ಣಿ. ಸಂದೀಪ ಸಾಬಳೆ, ಭಾರತಿ ಕಲಾಲ, ಆನಂದ ದಾಸರ, ದ್ಯಾಮಣ್ಣ ಜೋಗಣ್ಣವರ, ಸಂತೋಷ ಬೆಟಗೇರಿ, ಕುಮಾರ ಪೂಜಾರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net