ನೇತ್ರದಾನ ಮಾಡಿ ಮತ್ತೊಂದು ಜೀವಕ್ಕೆ ಬೆಳಕಾಗಿ

2
ಶಿಡ್ಲಘಟ್ಟದ ಶ್ರೀ ಶೃಂಗೇರಿ ಶಂಕರಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ನೇತ್ರ ತಪಾಸಣಾ ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದ್ ಗೌಡ, ಜೆಡಿಎಸ್ ಯುವ ಮುಖಂಡ ಬಿ.ಎನ್.ಸಚಿನ್‌ಕುಮಾರ್ ಇತರರು ಇದ್ದರು.
Published on

ಶ್ರೀಶೃಂಗೇರಿ ಶಂಕರಮಠದ ಆವರಣದಲ್ಲಿ ನೇತ್ರ ತಪಾಸಣೆ ಶಿಬಿರ

ಶಿಡ್ಲಘಟ್ಟ: ದೇಹದಲ್ಲಿರುವ ಒಂದು ಅಂಗ ಕಳೆದುಕೊಂಡರೆ ಜೀವನ ನಡೆಸಬಹುದು. ಆದರೆ, ದೃಷ್ಟಿ ದೋಷವಾದರೆ ಇಡೀ ಜೀವನ ಕತ್ತಲೆಯ ಕೂಪದಲ್ಲಿ ಸಿಲುಕುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ಹೇಳಿದರು.

ನಗರದ ಶ್ರೀಶೃಂಗೇರಿ ಶಂಕರಮಠದ ಆವರಣದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಚಿಕ್ಕಬಳ್ಳಾಪುರ ಜೈನ್ ಮಿಷನ್ ಆಸ್ಪತ್ರೆ ಸಹಯೋಗದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ 77ನೇ ವರ್ಷದ ಜನ್ಮದಿನದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿಯೊಬ್ಬರು ಆರೋಗ್ಯವಾಗಿರಬೇಕೆಂದು ಅನೇಕ ಯೋಜನೆ ರೂಪಿಸಿ, ಜಾರಿಗೆ ತಂದಿದ್ದು, ಎಲ್ಲರೂ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಮಾಜ ಸೇವಕರು ಮತ್ತು ಸಂಘ-ಸಂಸ್ಥೆಗಳ ಮುಖಂಡರು, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ, ಆರೋಗ್ಯವಂತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, ಪೌರಾಯುಕ್ತ ಮಂಜುನಾಥ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಸುರೇಶ್‌ಗೌಡ, ಶ್ರೀ ಶೃಂಗೇರಿ ಶಂಕರ ಮಠ ಅಭಿವೃದ್ಧಿ ಮತ್ತು ಸೇವಾ ಟ್ರಸ್ಟ್ ಅಧ್ಯಕ್ಷ ವಿ.ಕೃಷ್ಣ, ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದ್ ಗೌಡ, ಜೆಡಿಎಸ್ ಯುವ ಮುಖಂಡ ಬಿ.ಎನ್.ಸಚಿನ್‌ಕುಮಾರ್, ಜೈನ್ ಆಸ್ಪತ್ರೆಯ ವೈದ್ಯ ಡಾ.ರಂಜಿತ್, ಜ್ಞಾನವಿಕಾಸ್ ಸಮನ್ವಯ ಅಧಿಕಾರಿ ಅರುಣಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net