ಶಾಲೆಗಳಿಗೆ ಡೆಸ್ಕ್, ಬೆಂಚ್ ವಿತರಣೆ

24mdk04 Bentch
Published on

ಕುಶಾಲನಗರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿಯಾಗಿ ವಿವಿಧ ಸೇವಾ ಚಟುವಟಿಕೆಗಳನ್ನು ಮಾಡುತ್ತಿರುವುದು ಮಾದರಿಯಾಗಿದೆ ಎಂದು ಸಂಘದ ಪ್ರತಿನಿಧಿ ರೋಹಿತ್ ಹೇಳಿದರು.

ಇಲ್ಲಿನ ಜ್ಞಾನಭಾರತಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಿಗೆ ಡೆಸ್ಕ್, ಬೆಂಚ್ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮ ಕಲ್ಯಾಣ, ಹಿಂದು ರುದ್ರಭೂಮಿಗಳ ಅಭಿವೃದ್ಧಿ ಯೋಜನೆಗಳಿಗೆ ಧನಸಹಾಯ, ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿಗೆ ಬೆಂಚುಗಳ ವಿತರಣೆ, ಮತ್ತು ಹಾಲು ಉತ್ಪಾದಕರ ಸಂಘದ ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ಹಣಕಾಸು ನೆರವು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net