ಟಿಎಂಎ ಪೈ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ

tma hospital
ಬೆಳಂಜೆ ಸಂಜೀವ ಹೆಗ್ಡೆ ಟ್ರಸ್ಟ್‌ನಿಂದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ ನೀಡಲಾಯಿತು. ಟ್ರಸ್ಟ್ ಮುಖ್ಯಸ್ಥ, ಡಾ.ಎಚ್.ಸುದರ್ಶನ್ ಬಲ್ಲಾಳ್, ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ ವೆಂಕಟೇಶ್, ಮಾಹೆ ಮಣಿಪಾಲದ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಮತ್ತಿತರರು ಇದ್ದರು.
Published on

ಕಾರ್ಕಳ: ಬೇಳಂಜೆ ಸಂಜೀವ ಹೆಗ್ಡೆ ಸ್ಮರಣಾರ್ಥ ಹೆಬ್ರಿಯ ಬೇಳಂಜೆ ಸಂಜೀವ ಟ್ರಸ್ಟ್ ವತಿಯಿಂದ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡಲಾಯಿತು.

ಟ್ರಸ್ಟ್ ಮುಖ್ಯಸ್ಥ, ಡಾ.ಎಚ್.ಸುದರ್ಶನ್ ಬಲ್ಲಾಳ್ ಡಯಾಲಿಸಿಸ್ ಯಂತ್ರ ಹಸ್ತಾಂತರಿಸಿದರು. ಮಾಹೆ ಮಣಿಪಾಲ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ ವೆಂಕಟೇಶ್ ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಹಾಗೂ ಹೃದಯ ರಕ್ತನಾಳದ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಂಸ್ಥಾಪಕ ನಾಡೋಜ ಡಾ.ಜಿ.ಶಂಕರ್ ತಮ್ಮ ಟ್ರಸ್ಟ್ ಕೈಗೊಂಡ ಡಯಾಲಿಸಿಸ್ ಉಪಕ್ರಮಗಳ ಕುರಿತು ತಿಳಿಸಿದರು. ಟ್ರಸ್ಟಿ ಹಾಗೂ ಮಾಹೆ ಮಣಿಪಾಲದ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾಹೆ ಮಣಿಪಾಲದ ಸಹ ಕುಲಪತಿ ಡಾ.ಶರತ್‌ಕುಮಾರ್ ರಾವ್, ಕೆಎಂಸಿ ಮಣಿಪಾಲದ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿಒಒ ಡಾ.ಆನಂದ್ ವೇಣುಗೋಪಾಲ್, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು. ಡಾ.ದರ್ಶನ್ ರಂಗಸ್ವಾಮಿ ಸ್ವಾಗತಿಸಿದರು. ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net