ಫಲಪುಷ್ಪ ಪ್ರದರ್ಶನಕ್ಕೆ 35 ಸಾವಿರ ರೂ.ದೇಣಿಗೆ

Donation of Rs. 35 thousand for the flower exhibition
ವಿಜಯಪುರದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿ ವತಿಯಿಂದ ನಿರ್ದೇಶಕರು 35 ಸಾವಿರ ರೂ. ದೇಣಿಗೆ ಚೆಕ್‌ನ್ನು ತೋಟಗಾರಿಕೆ ಇಲಾಖೆ ಅಧಿಕಾರಿಗೆ ಹಸ್ತಾಂತರಿಸಿದರು. ಬಸಯ್ಯ ಹಿರೇಮಠ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ ಮತ್ತಿತರರಿದ್ದರು.
Published on

ವಿಜಯಪುರ: ನಗರದಲ್ಲಿ ತೋಟಗಾರಿಕೆ ಇಲಾಖೆ ಜ.13 ರಿಂದ 15 ರವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನದ ಪ್ರಾಯೋಜಕತ್ವಕ್ಕೆ ಸಿದ್ಧಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಆಡಳಿತ ಮಂಡಳಿ ನಿರ್ಣಯದಂತೆ ನಿರ್ದೇಶಕರು ಮಂಗಳವಾರ 35 ಸಾವಿರ ರೂ.ದೇಣಿಗೆ ಚೆಕ್‌ನ್ನು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ಸಿದ್ಧಸಿರಿ ಸಂಸ್ಥೆಯು ಸದಾ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಪರಿಸರ ಅಭಿವೃದ್ಧಿಗಾಗಿ ಸಹಾಯ ಸಹಕಾರ ಮಾಡುತ್ತಿದೆ. ಅಲ್ಲದೆ, ನಗರದಲ್ಲಿ ಇತ್ತೀಚೆಗೆ ನಡೆದ ವೃಕ್ಷಥಾನ್ ಹೆರಿಟೇಜ್ ರನ್‌ಗೂ 10 ಲಕ್ಷ ರೂ. ದೇಣಿಗೆ ನೀಡಿತ್ತು. ಸದ್ಯ ಜಿಲ್ಲೆಯ ತೋಟಗಾರಿಕೆ ಬೆಳೆಗಳ ಉತ್ತೇಜನಕ್ಕಾಗಿ ನಡೆಯುವ ಫಲ-ಪುಷ್ಪ ಪ್ರದರ್ಶನ ನಡೆಸಲು ದೇಣಿಗೆ ನೀಡಲಾಗಿದೆ ಎಂದು ನಿರ್ದೇಶಕರು ತಿಳಿಸಿದರು.

ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ಗಣಪತಿ ಜಾಧವ, ಜನರಲ್ ಮ್ಯಾನೇಜರ್‌ಗಳಾದ ಆರ್.ಟಿ. ಪಾಟೀಲ, ಈರೇಶ ಕೋರೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net