

ಕಿನ್ನಿಗೋಳಿ: ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್‌ನಲ್ಲಿ ಅಕ್ಷಯಪಾತ್ರ ಫೌಂಡೇಶನ್ ವತಿಯಿಂದ ನೀಡಲಾಗುತ್ತಿರುವ ಮಧ್ಯಾಹ್ನದ ಊಟದ ಖರ್ಚು ವೆಚ್ಚವನ್ನು ಮೂಲ್ಕಿ ಲಯನ್ಸ್ ಕ್ಲಬ್ ವಹಿಸಿಕೊಂಡಿದ್ದು, ಯೋಜನೆಗೆ ಚಾಲನೆ ನೀಡಲಾಯಿತು.
ಲಯನ್ಸ್ ಕ್ಲಬ್ ಮೂಲ್ಕಿ ಅಧ್ಯಕ್ಷ ಜಿ.ಎಂ.ಹರ್ಷರಾಜ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಒಂದು ಲಕ್ಷ ಐವತ್ತು ಸಾವಿರ ಪ್ರಥಮ ಹಂತದ ಮೊತ್ತವಾಗಿ ಅಕ್ಷಯಪಾತ್ರ ಫೌಂಡೇಶನ್‌ಗೆ ನೀಡಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಶೀತಲ್ ಸುಶೀಲ್, ಕೋಶಾಧಿಕಾರಿ ಸುಶೀಲ್ ಬಂಗೇರ, ಸದಸ್ಯರಾದ ಕಿಶೋರ್ ಶೆಟ್ಟಿ, ಉದಯ ಶೆಟ್ಟಿ, ಪ್ರವೀಣ್ ಶೆಟ್ಟಿ, ನಿರುಪಮಾ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸುಜಿತ್ ಸಾಲ್ಯಾನ್, ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಪ್ರಾಚಾರ್ಯ ಜಿತೇಂದ್ರ ವಿ.ರಾವ್ ವಂದಿಸಿದರು. ಸಹಶಿಕ್ಷಕ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.