ಡೋಂಗ್ರಿ-ಸುಂಕಸಾಳ ತೂಗು ಸೇತುವೆ ಶೀಘ್ರ ನಿರ್ಮಾಣ

Rupali Naik 1
Published on

ಕಾರವಾರ: ಅಂಕೋಲಾ ತಾಲೂಕಿನ ಡೋಂಗ್ರಿ-ಸುಂಕಸಾಳ ನಡುವೆ ತೂಗು ಸೇತುವೆ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂ.ಗಳನ್ನು ಈಗಾಗಲೇ ಮಂಜೂರು ಮಾಡಿದ್ದು, ಶೀಘ್ರ ಕಾಮಗಾರಿಗೆ ಕ್ರಮ ವಹಿಸಲಾಗುವುದು ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

ಜ.17 ರಂದು ವಿಜಯವಾಣಿ ‘ತೆಪ್ಪ ಏರಿ ಶಾಲೆಗೆ ಪಯಣ ವಿದ್ಯಾರ್ಥಿಗಳ ಪ್ರಾಣವೇ ಪಣ’ ಎಂಬ ಶೀರ್ಷಿಕೆಯಡಿ ವರದಿಗೆ ಬುಧವಾರ ಪ್ರತಿಕ್ರಿಯಿಸಿದ ಶಾಸಕಿ ರೂಪಾಲಿ, 2019 ರಲ್ಲಿ ತೂಗು ಸೇತುವೆ ಕೊಚ್ಚಿ ಹೋಗಿ ಜನ ಸಮಸ್ಯೆ ಅನುಭವಿಸುತ್ತಿರುವ ಅರಿವಿದೆ. ಒಂದೆಡೆ ದೋಣಿ ವ್ಯವಸ್ಥೆ ಮಾಡಿದ್ದೇವೆ. ಮಕ್ಕಳ ಸುರಕ್ಷತೆಗೆ ನಾವು ಬದ್ಧರಿದ್ದೇವೆ ಎಂದಿದ್ದಾರೆ.

ಅಮದಳ್ಳಿ ಆಸ್ಪತ್ರೆ: ಜ.26 ರಂದು ಅಮದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟನೆ ಮಾಡಿದ್ದಾರೆ. ಆದರೆ, ಈ ಬಗ್ಗೆ ತಮಗೆ ಬಗ್ಗೆ ಪೂರ್ವ ಮಾಹಿತಿ ನೀಡದ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಮಂತ್ರಣ ಪತ್ರಿಕೆಯಲ್ಲಿ ಕೆಲವಷ್ಟೇ ಗ್ರಾಪಂ ಸದಸ್ಯರ ಹೆಸರಿತ್ತು. ಕಾರ್ಯಕ್ರಮ ನಡೆಸುವ ಬಗ್ಗೆ ತಮಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಜ.25 ರಂದು ಆಮಂತ್ರಣ ಪತ್ರಿಕೆ ನೀಡಿದರು. ಇವು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net