

ಬೈಂದೂರು: ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರ್ಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದ್ದು, ಶಾಲೆಯ ಉಳಿವಿಗೆ ಶಿಕ್ಷಣಾಭಿವಾನಿಗಳು ಮತ್ತು ದಾನಿಗಳು ಸಹಕಾರ ನೀಡುವುದು ಇಂದಿನ ಅಗತ್ಯ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್‌ನ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.
ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೋಷಕ ಸಭೆಯಲ್ಲಿ, ಟ್ರಸ್ಟ್ ವತಿಯಿಂದ ನೀಡಿದ ಒಂದು ಲಕ್ಷಕ್ಕೂ ಅಧಿಕ ನೋಟ್ಸ್ ಪುಸ್ತಕ ಮತ್ತು ಆಂಗ್ಲ ವಾಧ್ಯಮ ಪುಸ್ತಕವನ್ನು ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಮೂಲಭೂತ ಸೌಕರ್ಯವನ್ನು ನಮ್ಮ ಟ್ರಸ್ಟ್ ವತಿಯಿಂದ ಉಚಿತವಾಗಿ ಒದಗಿಸಲಾಗುತ್ತದೆ. ಈ ಶಾಲೆಯನ್ನು ಶೈಕ್ಷಣಿಕವಾಗಿ ಭೌತಿಕವಾಗಿ ಅಭಿವೃದ್ಧಿ ಪಡಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಬಿಜೂರು ಸರ್ಕಾರಿ ಶಾಲೆಯನ್ನು ದತ್ತು ಸ್ವೀಕರಿಸಿದ್ದು, ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷೆ ಶಾರದಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ರಾಜೇಂದ್ರ ಬಿಜೂರ್, ಟ್ರಸ್ಟ್ ಸಂಯೋಜಕ ನಾಗರಾಜ್ ಪಿ., ಪೋಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮಂಜುನಾಥ ಎಸ್. ಬಿಜೂರು ಸ್ವಾಗತಿಸಿದರು. ಪ್ರತಿಮಾ ವಂದಿಸಿದರು. ಗೌರವ ಶಿಕ್ಷಕಿ ಭಾರತಿ ನಿರೂಪಿಸಿದರು.