ಅಹಿತಕರ ಘಟನೆಗಳಿಗೆ ಆಸ್ಪದ ನೀಡಬೇಡಿ

MUL SHANTI SABHE
Published on

ಮುಳಗುಂದ: ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದೆ ಹೋಳಿ ಹಬ್ಬವನ್ನು ಸಂಭ್ರಮದಿಂದ ಶಾಂತಿಯುತವಾಗಿ ಆಚರಿಸಬೇಕು ಎಂದು ಎಂದು ಸಿಪಿಐ ಸಂಗಮೇಶ ಶಿವಯೋಗಿ ಹೇಳಿದರು.

ಹೋಳಿ ಹಬ್ಬ ಆಚರಣೆ ನಿಮಿತ್ತ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಕರೆದಿದ್ದ ಶಾಂತಿ ಪಾಲನೆ ಸಭೆಯಲ್ಲಿ ಅವರು ಮಾತನಾಡಿದರು. ಯಾರೊಬ್ಬರೂ ಯಾರಿಗೂ ಒತ್ತಾಯಪೂರ್ವಕವಾಗಿ ಬಣ್ಣ ಹಚ್ಚಬಾರದು. ಇದು ಅಹಿತಕರ ಘಟನೆಗಳಿಗೆ ಕಾರಣವಾಗುತ್ತವೆ. ದ್ವಿತೀಯ ಪಿಯು ಪರೀಕ್ಷೆ ಹಾಗೂ ರಂಜಾನ್ ಇರುವುದರಿಂದ ಸೌರ್ಹಾರ್ದದಿಂದ ನಡೆದುಕೊಳ್ಳಬೇಕು. ಆಚರಣೆ ದಿನ ಮದ್ಯಪಾನವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುವವರು, ಶಾಂತಿ ಭಂಗ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಿಎಸ್​ಐ ಡಿ.ಎಂ. ಮುಲ್ಲಾ, ಅಶೋಕ ಹುಣಸಿಮರದ, ಮರಿಯಪ್ಪ ನಡುಗೇರಿ, ಪಿ.ಎಂ. ದೊಡ್ಡಮನಿ, ಇಮಾಮಸಾಬ್ ಟೆಕ್ಕೆದ, ರಮೇಶ ಮ್ಯಾಗೇರಿ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net