ದುಶ್ಚಟಕ್ಕೆ ಬಲಿಯಾಗಬೇಡಿ

bhr jci
ಬಾಳೆಹೊನ್ನೂರಿನ ಜೆಸಿಐನಿಂದ ಸರ್ಕಾರಿ ಪಿಯು ಕಾಲೇಜಿನಲ್ಲಿ ವನಮಹೋತ್ಸವ ಆಚರಿಸಲಾಯಿತು. ದಿಲೀಪ್ ಕುಮಾರ್, ಕೃಷ್ಣಮೂರ್ತಿ, ಅಜಿತ್, ನಿಖಿಲ್, ಪ್ರದೀಪ್, ಸುನೀಲ್ ಇತರರಿದ್ದರು.
Published on

ಬಾಳೆಹೊನ್ನೂರು: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಪಿಎಸ್‌ಐ ವಿ.ಟಿ.ದಿಲೀಪ್‌ಕುಮಾರ್ ಹೇಳಿದರು.

ಜೆಸಿ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಮಾದಕದ್ರವ್ಯಗಳ ಕುರಿತು ಜಾಗೃತಿ, ವನಮಹೋತ್ಸವದಲ್ಲಿ ಮಾತನಾಡಿದರು.
ವಿದ್ಯಾರ್ಥಿ ದೆಸೆಯಲ್ಲಿ ಯಾರದ್ದೋ ಒತ್ತಾಯಕ್ಕೆ ಮಣಿದು ಮಾದಕ ದ್ರವ್ಯ, ಗುಟ್ಖಾ, ಸಿಗರೇಟ್, ಮದ್ಯ ಸೇವನೆಯಲ್ಲಿ ತೊಡಗಿಕೊಂಡರೆ ಜೀವನವನ್ನೇ ಹಾಳು ಮಾಡಿಕೊಳ್ಳಬೇಕಾಗುತ್ತದೆ. ಉತ್ತಮ ಆರೋಗ್ಯ ಕಳೆದುಕೊಂಡು ಜೀವನ ವ್ಯರ್ಥವಾಗಲಿದೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿಯೂ ಭಾಗವಹಿಸಬಾರದು. ಒಮ್ಮೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೆ ಸರ್ಕಾರಿ ನೌಕರಿ, ಕಂಪನಿಗಳಲ್ಲಿ ಕೆಲಸ ಸಿಗುವುದಿಲ್ಲ ಎಂದು ತಿಳಿಸಿದರು.
ಕಾಲೇಜು ಆವರಣದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಪ್ರಾಚಾರ್ಯ ಬಿ.ಎಚ್.ಕೃಷ್ಣಮೂರ್ತಿ, ಜೆಸಿಐ ಅಧ್ಯಕ್ಷ ಬಿ.ಎಸ್.ಅಜಿತ್, ಕಾರ್ಯದರ್ಶಿ ನಿಖಿಲ್ ಕಾನ್ಕೆರೆ, ಸದಸ್ಯರಾದ ಯು.ಸಿ.ಪ್ರದೀಪ್, ಸುನೀಲ್ ಹೆಮ್ಮಕ್ಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net