ಕ್ಷಯದ ಬಗ್ಗೆ ಭಯ ಬೇಡ ಜಾಗೃತಿಯಿರಲಿ

24-03-Shiva-2
ರಾಯಚೂರಿನ ಡಿಎಚ್‌ಒ ಕಚೇರಿ ಆವರಣದಲ್ಲಿ ವಿಶ್ವ ಕ್ಷಯ ರೋಗ ನಿರ್ಮೂಲನಾ ದಿನಾಚರಣೆ ನಿಮಿತ್ತ ಭಾನುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಚಾಲನೆ ನೀಡಿದರು. ಡಿಎಚ್‌ಒ ಡಾ.ಸುರೇಂದ್ರಬಾಬು, ರಿಮ್ಸ್ ನಿರ್ದೇಶಕ ಡಾ.ರಮೇಶ, ಜಿಲ್ಲಾ ಶಸ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಕಾರಿ ಡಾ.ಎಂ.ಡಿ.ಶಾಕೀರ್, ಜಿಲ್ಲಾ ಕುಟುಂಬ ಕಲ್ಯಾಣಾಕಾರಿ ಡಾ.ಶಿವಕುಮಾರ, ಸರ್ವೇಕ್ಷಣಾಕಾರಿ ಡಾ.ಗಣೇಶ ಇದ್ದರು.
Published on

ರಾಯಚೂರು: ಕ್ಷಯ ರೋಗದ ಬಗ್ಗೆ ಜನರು ಭಯ ಬೀಳಬೇಕಾಗಿಲ್ಲ. ಆದರೆ ಜಾಗೃತಿ ಹೊಂದಿರುವುದು ಅತ್ಯವಶ್ಯವಾಗಿದೆ. ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
ಸ್ಥಳೀಯ ಡಿಎಚ್‌ಒ ಕಚೇರಿ ಆವರಣದಲ್ಲಿ ವಿಶ್ವ ಕ್ಷಯ ರೋಗ ನಿರ್ಮೂಲನಾ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಜಾಗೃತ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಕ್ಷಯ ರೋಗ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ಕ್ಷಯ ರೋಗವನ್ನು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದಾಗಿದ್ದು, ನಿಯಮಿತವಾಗಿ ಕೆಮ್ಮು ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಜನರು ಹತ್ತಿರದ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೆ ಭಯಭೀತರಾಗಬಾರದು.
ಜಿಲ್ಲೆಯಲ್ಲಿ ಕ್ಷಯ ರೋಗದಿಂದ ಸಾವನ್ನಪ್ಪುವವರ ಪ್ರಮಾಣ ಶೇ.6ರಷ್ಟಿದ್ದು, ಜನರಲ್ಲಿ ಜಾಗೃತಿ ಮೂಡಿಸಿದಲ್ಲಿ ಪ್ರಮಾಣವನ್ನು ಶೇ.2ಕ್ಕೆ ತರಬಹುದಾಗಿದೆ. ಜತೆಗೆ ರೋಗ ಬಾರದಂತೆ ಹಾಗೂ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
ಈ ಸಂದರ್ಭದಲ್ಲಿ ಡಿಎಚ್‌ಒ ಡಾ.ಸುರೇಂದ್ರಬಾಬು, ರಿಮ್ಸ್ ನಿರ್ದೇಶಕ ಡಾ.ರಮೇಶ, ಜಿಲ್ಲಾ ಶಸ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಕಾರಿ ಡಾ.ಎಂ.ಡಿ.ಶಾಕೀರ್, ಜಿಲ್ಲಾ ಕುಟುಂಬ ಕಲ್ಯಾಣಾಕಾರಿ ಡಾ.ಶಿವಕುಮಾರ, ಸರ್ವೇಕ್ಷಣಾಕಾರಿ ಡಾ.ಗಣೇಶ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net