ವಿಮಾನ ನಿಲ್ದಾಣದ ಭಯ ಬೇಡ

ನೆಲಮಂಗಲ ತಾಲೂಕಿನ ಬಾಣಸವಾಡಿಯಲ್ಲಿ ಆಯೋಜಿಸಿದ್ದ ‘ಶಾಸಕರ ನಡೆ ಹಳ್ಳಿ ಕಡೆ’ ಎಂಬ ಕಾರ್ಯಕ್ರಮ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್ ಚಾಲನೆ ನೀಡಿದರು. ಬ್ಲಾಕ್ ಉಪಾಧ್ಯಕ್ಷ ಸಿ.ಎಂ.ಗೌಡ, ಗಾಂಧಿ ಗ್ರಾಮ ವಿಎಸ್ಸೆಸ್ಸೆನ್ ಅಧ್ಯಕ್ಷ ವೀರಮಾರೇಗೌಡ, ಉದ್ಯಮಿ ಹನುಮಂತರಾಯಪ್ಪ, ಗ್ರಾಪಂ ಅಧ್ಯಕ್ಷ ಸಂತೋಷ್ ನಾಯ್ಕ, ಸದಸ್ಯ ಮಂಜುನಾಥಯ್ಯ, ಪಿಡಿಒ ರೇಖಾ ಮುಖಂಡ ಚಿಕ್ಕಣ, ಮಂಜುನಾಥ್, ನಟರಾಜು ಸೇರಿದಂತೆ ಇನ್ನಿತರರು ಇದ್ದರು.

Published on

ಜನತೆಗೆ ಎನ್.ಶ್ರೀನಿವಾಸ್ ಅಭಯ - ‘ಶಾಸಕರ ನಡೆ ಹಳ್ಳಿ ಕಡೆ’ ಕಾರ್ಯಕ್ರಮ

ನೆಲಮಂಗಲ: ಸೋಲದೇವನಹಳ್ಳಿ, ಯಂಟ ಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ. ಈ ಭಾಗದ ರೈತರ ಪರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದ್ದರಿಂದ ವಿಮಾನ ನಿಲ್ದಾಣ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.

ಬಾಣಸವಾಡಿಯಲ್ಲಿ ಬುಧವಾರ ‘ಶಾಸಕರ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿತ್ಯ ಶ್ರಮಿಸಲಾಗುತ್ತಿದೆ, ಬೆಂಗಳೂರಿಗೆ ಹೊಂದಿಕೊಂಡಿರುವ ನೆಲಮಂಗಲ ತಾಲೂಕು ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದ್ದು, ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ತರಲಾಗಿದೆ. ಗ್ರಾಮೀಣ ಭಾಗದ ರೈತರ ಸಮಸ್ಯೆ ಆಲಿಸುವ ಉದ್ದೇಶದಿಂದ ‘ಶಾಸಕರ ನಡೆ ಹಳ್ಳಿಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2ಕೋಟಿ ವೆಚ್ಚದಲ್ಲಿ ಬಾಣಸವಾಡಿ

್ರಾಮದಿಂದ ಸೊಂಡೇಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ

ಚಾಲನೆ ನೀಡಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದರು.

ಸಮಸ್ಯೆ ಪರಿಹಾರಕ್ಕೆ ಮನವಿ: ಗ್ರಾಮದಲ್ಲಿ ಸಮುದಾಯ ಭವನ, ನೀರಿನ ಸೌಲಭ್ಯ, ಗ್ರಾಮದ ಕೆಲ ರಸ್ತೆಗಳು ಹಾಗೂ ಚರಂಡಿ ಅಭಿವೃದ್ಧಿ ಸೇರಿ ನಿತ್ಯ ಶಾಲಾ ಕಾಲೇಜಿಗೆ ತೆರಳು ವಿದ್ಯಾರ್ಥಿಗಳ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು. ಗ್ರಾಮದಲ್ಲಿ ರಸ್ತೆ, ಚರಂಡಿ ಸೇರಿ ಕೆಲ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ವಿಶೇಷ ಅನುದಾನದಲ್ಲಿ 50ಲಕ್ಷ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net