

ಕಂಪ್ಲಿ: ಆಮೀಷಕ್ಕೊಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸಬೇಕು ಎಂದು ತಹಸೀಲ್ದಾರ್ ಎಸ್.ಶಿವರಾಜ ಹೇಳಿದರು.
ಇಲ್ಲಿನ ಷಾ.ಮಿಯಾಚಂದ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ ಶನಿವಾರ ಮಾತನಾಡಿ, ಮತದಾನ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಎಲ್ಲಾ ಮತದಾರರು ತಪ್ಪದೇ ಕಡ್ಡಾಯವಾಗಿ, ಯಾವುದೇ ಆಮೀಷಕ್ಕೊಳಗಾಗದೆ ಮತ ಚಲಾಯಿಸಬೇಕು ಎಂದರು.
ನರೇಗಾ ಎಡಿ ಕೆ.ಎಸ್.ಮಲ್ಲನಗೌಡ ಮಾತನಾಡಿ, ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಚುನಾವಣೆ ಆಯೋಗ ಕಾರ್ಯವಿಧಾನ ಅರಿಯುವಲ್ಲಿ ಜಾಗೃತಿ ತೋರಬೇಕು ಎಂದರು. ಚುನಾವಣಾ ಸಾಕ್ಷರತಾ ಸಮಿತಿ ಹಮ್ಮಿಕೊಂಡಿದ್ದ ಪ್ರಬಂಧ, ರಸಪ್ರಶ್ನೆ, ಭಿತ್ತಿಚಿತ್ರ ತಯಾರಿಕೆ ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು. ತಾಪಂ ಇಒ ಆರ್.ಕೆ.ಶ್ರೀಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಮುಖರಾದ ಕೆ.ದುರುಗಣ್ಣ, ಸುಜಾತ, ಟಿ.ಎಂ.ಬಸವರಾಜ, ಬಾಲಾಜಿ, ಎಂ.ರೇವಣ್ಣ, ಡಾ.ಸುನೀಲ್ ಸೇರಿ ಇತರರಿದ್ದರು.