

ಮೇಲುಕೋಟೆ: ಮಂಡ್ಯಲೋಕಸಭಾ ಕ್ಷೇತ್ರದ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮೇಲುಕೋಟೆ ಕ್ಷೇತ್ರದ ಯಾರೊಬ್ಬರೂ ಬೆಟ್ಟಿಂಗ್ ಕಟ್ಟಬಾರದು ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಶಾಸಕರು ಬೆಟ್ಟಿಂಗ್ ಕಟ್ಟುವುದು ಕಾನೂನಿನಲ್ಲಿ ಅಪರಾಧವಾಗಿದ್ದು ಇದರಿಂದ ದ್ವೇಶ ಹೆಚ್ಚಾಗುತ್ತದೆ ಹೀಗಾಗಿ ಯಾರೂ ಬೆಟ್ಟಿಂಗ್‌ನಲ್ಲಿ ಭಾಗಿಯಾಗಬಾರದು ಎಂದಿದ್ದಾರೆ.
ರಾಜ್ಯದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ಮತಚಲಾಯಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿರುವ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆ ವಿಧಾನಸಭಾಕ್ಷೇತ್ರದಲ್ಲಿ ಮಂಡ್ಯಜಿಲ್ಲೆಯಲ್ಲೇ ಅತಿಹೆಚ್ಚು ಶೇ 87 ರಷ್ಟು ಮತದಾನವಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಕ್ಷೇತ್ರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಕ್ಕೆ ಕೃತಜ್ಞತೆ ಅರ್ಪಿಸುವುದಾಗಿ ಶಾಸಕರು ತಿಳಿಸಿದ್ದಾರೆ. ಇದೇ ವೇಳೆ ಮಂಡ್ಯ ಲೋಕಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸಮಾಡಿದ ರೈತಸಂಘ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸುವುದಾಗಿ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ.