ಹಬ್ಬದ ನೆಪದಲ್ಲಿ ತೊಂದರೆಯಾಗದಿರಲಿ

25 LXR 6
Published on

ಲಕ್ಷ್ಮೇಶ್ವರ: ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದ ಹತ್ತಿರ ಹಿಂದು ಮಹಾಸಭಾದಿಂದ ಪ್ರತಿಷ್ಠಾಪಿಸಿರುವ ಗಣೇಶನ ಮಹಾಮಂಟಪಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡರ ಭೇಟಿ ನೀಡಿದರು.

ಈ ವೇಳೆ ಮಾತನಾಡಿ, ಹಬ್ಬಗಳು ನಾಡಿನ ಸಂಸ್ಕೃತಿಯ ಪ್ರತೀಕಗಳಾಗಿದ್ದು, ಅವುಗಳಿಗೆ ಧಕ್ಕೆಯಾಗದಂತೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕು. ಹಬ್ಬದ ನೆಪದಲ್ಲಿ ಯಾವುದಕ್ಕೂ ಅಪಚಾರವಾಗದಂತೆ, ಯಾರಿಗೂ ತೊಂದರೆಯಾಗದಂತೆ ಶಿಸ್ತು, ಸಂಯಮ ಮತ್ತು ಸಂಪ್ರದಾಯ ಮೆರೆಯಬೇಕು. ಮಾನವ ಧರ್ಮಕ್ಕೆ ಜಯವಾಗಲಿ. ಧರ್ಮದಿಂದಲೇ ವಿಶ್ವಕ್ಕೆ ಎಂಬ ಶಾಂತಿ ಮಂತ್ರ ಮೊಳಗಿದ ನೆಲದಲ್ಲಿ ಸ್ನೇಹ, ಸೌಹಾರ್ದದಿಂದ ಬದುಕಬೇಕು ಎಂದು ಸಲಹೆ ನೀಡಿದರು. ಮಂಡಳಿಯ ಸದಸ್ಯರು, ಇಲಾಖೆ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net