ಸರ್ಕಾರಿ ಶಾಲೆ ಮುಚ್ಚಿದ್ದಕ್ಕೆ ಆಕ್ಷೇಪ

kannada-school-stooped
Published on

ಕಾರವಾರ: ಮಕ್ಕಳು ಕಡಿಮೆ ಇರುವ ಸರ್ಕಾರಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಕಾರವಾರ ಜಿಲ್ಲಾಧಿಕಾರಿ ಕಚೇರಿಯ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಗಡಿಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ವಿಜಯಪುರ, ರಾಯಚೂರು, ಕಲಬುರಗಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮುಂತಾದೆಡೆ ಹೆಚ್ಚು ಶಾಲೆಗಳನ್ನು ಮುಚ್ಚಲಾಗಿದೆ.

ಶಾಲಾ ದಾಖಲಾತಿ ಎಂಬ ಅವೈಜ್ಞಾನಿಕ ನಿಯಮ ಹಾಗೂ ಸರ್ಕಾರದ ಅಪ್ರಬುದ್ಧ ನಿಯಮಗಳು ಇಂಥ ಪರಿಸ್ಥಿತಿಗೆ ಕಾರಣವಾಗುತ್ತವೆ. ಸರ್ಕಾರ ಗಡಿ ಭಾಗದ ಶಾಲೆಗಳಲ್ಲಿ ದಾಖಲಾತಿಗೆ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಶಿವಾನಂದ ಕಮ್ಮಾರ, ಉಪಾಧ್ಯಕ್ಷ ಬಸರವಾಜ ಪಾಟೀಲ, ಹಳಿಯಾಳ ತಾಲೂಕು ಅಧ್ಯಕ್ಷ ಲಕ್ಷ್ಮಣ ಘಾಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net