

ಯಲ್ಲಾಪುರ: ಯಾವುದೇ ಜಯಂತಿಯನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು. ವಾಲ್ಮೀಕಿ ಮಹರ್ಷಿಗಳಂತಹ ಮಹಾಪುರುಷರು ಒಟ್ಟೂ ಸಮಾಜದ ಆದರ್ಶದ ಪ್ರತಿನಿಧಿಯಾಗಿ ನಿಲ್ಲುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು.
ಪಟ್ಟಣದ ಗಾಂಧಿ ಕುಟೀರದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಮನುಷ್ಯ ಪುರುಷೋತ್ತಮನಾದ ಚಿತ್ರಣವನ್ನು ವಾಲ್ಮೀಕಿ ರಾಮಾಯಣದಲ್ಲಿ ಬರೆದರೆ, ದೇವರ ವ್ಯಕ್ತಿತ್ವದ ಚಿತ್ರಣವನ್ನು ಮಹಾಭಾರತದಲ್ಲಿ ವ್ಯಾಸರು ನೀಡಿದ್ದಾರೆ ಎಂದರು.
ಶಿಕ್ಷಕ ವಿನೋದ ಭಟ್ಟ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣನವರ, ಪ.ಪಂ ಮುಖ್ಯಾಧಿಕಾರಿ ಸುನೀಲ ಗಾವಡೆ, ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ತಾಪಂ ಇಒ ರಾಜೇಶ ಧನವಾಡ್ಕರ, ಭೀಮಶಿ ವಾಲ್ಮೀಕಿ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ಜ್ಯೋತಿ ನರೋಟಿ ಇತರರಿದ್ದರು. ಶಿಕ್ಷಕ ಚಂದ್ರಹಾಸ ನಾಯ್ಕ ನಿರ್ವಹಿಸಿದರು.