

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಡಾ. ಧನಂಜಯ ಸರ್ಜಿ ಪದವೀಧರ ಮತದಾರರ ನಿರೀಕ್ಷೆ ಹುಸಿ ಮಾಡುವುದಿಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಕಾರ್ಯಾಲಯದಲ್ಲಿ ಶನಿವಾರ ಡಾ. ಧನಂಜಯ ಸರ್ಜಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆಯೊಂದಿಗೆ ಜನಮಾನಸದಲ್ಲಿರುವ ಡಾ. ಸರ್ಜಿ ಮುಂದಿನ ದಿನಗಳಲ್ಲಿ ರಾಜಕೀಯದಲ್ಲೂ ಉತ್ತಮ ಸೇವೆ ಸಲ್ಲಿಸುತ್ತಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಡಾ. ಧನಂಜಯ ಸರ್ಜಿ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಎದುರಿಸಿದ ಈ ಚುನಾವಣೆ ಕಾರ್ಯಕರ್ತರ ಗೆಲುವಾಗಿದೆ. ಪದವೀಧರರ ಗೆಲುವು, ಮೈತ್ರಿಯ ಗೆಲುವು. ಮುಂದಿನ ದಿನಗಳಲ್ಲಿ ಎಲ್ಲರ ಸಲಹೆ, ಮಾರ್ಗದರ್ಶನ ಪಡೆದು ಪರಿಷತ್‌ನಲ್ಲಿ ಪದವೀಧರರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಕಾರ್ಯಾಧ್ಯಕ್ಷ ರಾಮಕೃಷ್ಣ, ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಯುವ ಜನತಾ ದಳ ಜಿಲ್ಲಾಧ್ಯಕ್ಷ ಮಧುಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಎಸ್.ಸಿ. ಘಟಕ ಜಿಲ್ಲಾಧ್ಯಕ್ಷ ಕಾಂತರಾಜ್, ನಗರಾಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ವಕ್ತಾರ ನರಸಿಂಹ ಗಂಧದಮನೆ, ಯುವ ಜನತಾದಳ ಜಿಲ್ಲಾ ಕಾರ್ಯಾಧ್ಯಕ್ಷ ನಿಖಿಲ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಮಹೇಶ್, ನಗರಸಭೆ ಮಾಜಿ ಸದಸ್ಯ ಮಂಜುನಾಥ್ ಇತರರಿದ್ದರು.