ದುಶ್ಚಟಕ್ಕೆ ಬಲಿಯಾಗದಿರಿ

10 mlv 2
ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ರೂಪಾ ಮಾತನಾಡಿದರು. ಸ್ವಾಮಿ, ಶಿವಮೂರ್ತಿ, ಅಭಿಷೇಕ್ ಇದ್ದರು.
Published on

ಮಳವಳ್ಳಿ: ಶಾಲಾ ಮಕ್ಕಳು ಮಾದಕ ವಸ್ತುಗಳಿಗೆ ಹಾಗೂ ಅಮಲು ತರಿಸುವ ಪದಾರ್ಥ ಸೇರಿದಂತೆ ಇತರ ದುಶ್ಚಟಕ್ಕೆ ಬಲಿಯಾಗದೆ ಆರೋಗ್ಯವಂತರಾಗಿ ದೇಶಕ್ಕೆ ಉತ್ತಮ ಪ್ರಜೆಗಳಾಗುವಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೂಪಾ ತಿಳಿಸಿದರು.

ತಾಲೂಕಿನ ಭೀಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗುವ ಮೂಲಕ ಬಾಲ್ಯದ ಸವಿನಯ ಸಮಯವನ್ನೇ ದೂರಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್‌ಗಳಲ್ಲಿ ಎಷ್ಟು ಒಳ್ಳೆಯ ಮಾಹಿತಿ ಸಿಗುವುದೋ ಅಷ್ಟೇ ಪ್ರಮಾಣದಲ್ಲಿ ಎಳೆಯರ ಮನಸ್ಸನ್ನು ಚಂಚಲ ಗೊಳಿಸುವ ಹಾಗೂ ದುಶ್ಚಟಗಳಿಗೆ ಪ್ರೇರಣೆ ಮಾಡುವಂತ ವಿಷಯಗಳು ಲಭ್ಯವಾಗುತ್ತಿವೆ. ಇದು ಮಕ್ಕಳ ಭವಿಷ್ಯದ ದಿನಗಳ ಮೇಲೆ ದುಷ್ಪರಿಣಾಮ ಬೀರುವಂತಹ ಆತಂಕಕಾರಿ ಬೆಳವಣಿಗೆಯಾಗಿದೆ. ಆಗಾಗಿ ಪಾಲಕರು ತಮ್ಮ ಮಕ್ಕಳನ್ನು ಮೊಬೈಲ್‌ನತ್ತ ಗಮನ ಹರಿಸದಂತೆ ಮುತುವರ್ಜಿ ವಹಿಸಬೇಕಿದೆ ಎಂದು ಸಲಹೆ ನೀಡಿದರು.

ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಲಯದ ಮೇಲ್ವಿಚಾರಕ ಅಭಿಷೇಕ್ ಮಾತನಾಡಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮಹಿಳಾ ಸಬಲೀಕರಣ ಹಾಗೂ ಸದೃಢವಾದ ಉತ್ತಮ ಸಮಾಜ ನಿರ್ಮಾಣ ಮಾಡಲು ಮಾರ್ಗದರ್ಶನ ನೀಡುತ್ತಿದ್ದು, ಅವರ ಆಶಯಕ್ಕೆ ಪೂರಕವಾಗಿ ನಡೆಸುತ್ತಿರುವ ಕಾರ್ಯಕ್ರಮಗಳ ಸದುಪಯೋಗವಾಗಲು ನಿಮ್ಮ ಸಹಕಾರ ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸ್ವಾಮಿ, ಮುಖ್ಯಶಿಕ್ಷಕ ಶಿವಮೂರ್ತಿ, ಸೇವಾ ಪ್ರತಿನಿಧಿಗಳು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net