ಬಿಜೆಪಿ ಕುತಂತ್ರಕ್ಕೆ ಬಲಿಯಾಗಬೇಡಿ : ಎಂ. ಲಕ್ಷ್ಮಣ್

M-Lakshmana
Published on

ನಮ್ಮ ಪ್ರತಿಸ್ಪರ್ಧಿ ಬಗ್ಗೆ ನಾವು ಮಾತನಾಡಲು ಬಯಸುವುದಿಲ್ಲ. ಆದರೆ, ಬಿಜೆಪಿಯ ಕುತಂತ್ರಕ್ಕೆ ಜನರು ಬಲಿಯಾಗಬಾರದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಮನವಿ ಮಾಡಿದರು.

ಕಾಂಗ್ರೆಸ್‌ನಲ್ಲಿ ಯಾವುದೇ ರೀತಿಯ ಗೊಂದಲಗಳು ಇಲ್ಲ. ಟಿಕೆಟ್ ಆಕಾಂಕ್ಷಿಗಳಾಗಿದ್ದವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್ ಪ್ರತಿಯೊಬ್ಬರು ನನ್ನ ಗೆಲುಗೆ ಶ್ರಮಿಸುತ್ತಾರೆ. ನಾವು (ರಾಜ್ಯ ಸರ್ಕಾರ) ಕೂಲಿ ಮಾಡಿದ್ದೇವೆ, ಕೂಲಿಗೆ ಸಂಬಳ (ಮತ)ವನ್ನು ಮತದಾರರ ಬಳಿ ಕೇಳುತ್ತಿದ್ದೇವೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಾವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. 47 ವರ್ಷಗಳ ಬಳಿಕ ಒಕ್ಕಲಿಗ ಸಮುದಾಯಕ್ಕೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ದೊರೆತ್ತಿದ್ದು, ಮತದಾರರು ನನ್ನನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net