ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ ನ್ಯಾ. ಮಹೇಶ್ ಬಿ.ಟಿ ಸಲಹೆ

anti drug day
Published on

ರಾಮನಗರ:  ವಿದ್ಯಾರ್ಥಿಗಳು ಜೀವನ ರೂಪಿಸಿಕೊಳ್ಳುವಲ್ಲಿ ಈ ಹಂತ  ಸಕಾಲವಾಗಿರುತ್ತದೆ.  ಈ ಹಂತದಲ್ಲಿ ನೀವು ಹೆಚ್ಚು ಆಕರ್ಷಣೆಗೆ ಒಳಗಾಗುತ್ತೀರಿ, ವಿದ್ಯಾರ್ಥಿಗಳು ದೇಶದ ಭವಿಷ್ಯ ರೂಪಿಸುವವರು, ವಿದ್ಯಾರ್ಥಿಗಳಿಗೆ ಅನೇಕ ಜವಾಬ್ದಾರಿಗಳು ಇರುತ್ತದೆ ಅದನ್ನು ನೀವು ಉತ್ತಮವಾಗಿ ನಿರ್ವಹಿಸಿದಲ್ಲಿ ಮಾತ್ರ ಅದು ಫಲ ನೀಡುತ್ತದೆ ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹೇಶ್ ಬಿ.ಟಿ.  ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಅಬಕಾರಿ ಇಲಾಖೆ ಮತ್ತು ಸ್ನಾತ್ತಕೋತ್ತರ ಕೇಂದ್ರ (ಬೆಂಗಳೂರು ವಿಶ್ವವಿದ್ಯಾನಿಲಯ)ದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುತೂಹಲ, ಸ್ನೇಹಿತರ ಒತ್ತಾಯ, ಗೆಳೆಯರ ಗುಂಪಿನಲ್ಲಿ ಹೊಂದಾಗಬೇಕೆಂಬ ಭಾವನೆ, ದೈಹಿಕ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ತಾತ್ಕಾಲಿಕವಾಗಿ ಸಮಸ್ಯೆಯನ್ನು ಮರೆಯಲು ಹೀಗೆ ಅನೇಕ ಕಾರಣಗಳಿಗಾಗಿ ಮಾದಕ ವಸ್ತುಗಳ ಸೇವನೆ ಪ್ರಾರಂಭಿಸುತ್ತಾರೆ. ಆದರೆ ಅದು ವ್ಯಸನವಾಗಿ ಮಾರ್ಪಾಡಾಗಿ ಅನೇಕ ರೀತಿಯ ಸಮಸ್ಯೆಗಳಿಗೆ ಉಂಟಾಗುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಕೆಟ್ಟ ಸಹವಾಸ, ದುಷ್ಚಟಗಳಿಂದ ದೂರವಿದ್ದು, ಒಳ್ಳೆ ಅಭ್ಯಾಸಗಳ ಕಡೆ ಗಮನಕೊಡಬೇಕು ಮನಸ್ಸನ್ನು ಯಾವಾಗಲು ಶುದ್ಧವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕು ಎಂದರು.

ಈ ಸಂದರ್ಭದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರು ಹಾಗೂ ಪ್ರಾಧ್ಯಾಪಕರಾದ ಡಾ. ಡೊಮಿನಿಕ್, ಅಬಕಾರಿ ನಿರೀಕ್ಷಕರಾದ ರಾಘವೇಂದ್ರ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ಪದ್ಮಾ, ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾಡಿ ಡಾ. ಮಂಜುನಾಥ್, ಮನೋರೋಗ ತಜ್ಞರಾದ ಡಾ. ಆದರ್ಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ, ಮನೋ ವೈದ್ಯಕೀಯ ಕಾರ್ಯಕರ್ತರಾದ ಪದ್ಮರೇಖಾ ಸೇರಿದಂತೆ ಆರೋಗ್ಯ ಸಿಬ್ಬಂದಿಗಳು, ಸ್ನಾತ್ತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net