ನಮ್ಮ ಸಂಸ್ಕೃತಿ-ಸಂಪ್ರದಾಯ ಮರೆಯದಿರಿ

h17-rambapuri
Published on

ಹುಬ್ಬಳ್ಳಿ: ನಮ್ಮ ಹಿರಿಯರ ಮಾರ್ಗದರ್ಶನದಲ್ಲಿ ಬಂದಿರುವ ಸಂಸ್ಕೃತಿ-ಸಂಪ್ರದಾಯಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಕರ್ನಾಟಕ ವಿಶ್ವವಿದ್ಯಾಲಯ ಸಿಂಡಿಕೇಟ್ ಮಾಜಿ ಸದಸ್ಯ ಎನ್.ಆರ್. ಬಾಳಿಕಾಯಿ ಹೇಳಿದರು.

ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘ, ಕರ್ನಾಟಕ ಜಾನಪದ ಜಗತ್ತು ಟ್ರಸ್ಟ್ , ಜೀವಿ ಕಲಾ ಬಳಗದ ಆಶ್ರಯದಲ್ಲಿ ವಿದ್ಯಾನಗರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂಗಲ ಮೂರ್ತಿಗೆ ಶ್ರಾವಣ ಮಾಸ ನಿಮಿತ್ತ ಭಾನುವಾರ ಏರ್ಪಡಿಸಿದ್ದ ಮಹಾ ರುದ್ರಾಭಿಷೇಕ ಮುಕ್ತಾಯ ಹಾಗೂ ಮನೆ ಮನೆಯಲ್ಲಿ ಶ್ರಾವಣ ಜಾನಪದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮನೆ ಮನೆಯಲ್ಲಿ ಶ್ರಾವಣ ಜಾನಪದ ಕಾರ್ಯಕ್ರಮ ಕಳೆದ ಹತ್ತು ವರ್ಷಗಳಿಂದ ಆಯೋಜಿಸಲಾಗುತ್ತಿದೆ ಎಂದರು.

ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನಪದ ತಜ್ಞ ಡಾ. ರಾಮು ಮೂಲಗಿ ಜಾನಪದ ಹಾಡುಗಳನ್ನು ಹಾಡಿದರು. ಎಸ್.ಸಿ. ಕುಮ್ಮಾರ, ವಿ.ಜಿ. ಪಾಟೀಲ, ಡಾ.ಎಸ್.ವಿ. ಹಿರೇಮಠ, ಗದಗಯ್ಯ ಹಿರೇಮಠ, ಶಿವಾನಂದ ಬೆಂಗೇರಿ, ಬಸವರಾಜ ಸುಳ್ಳದ, ಎಂ.ಬಿ. ಪೂಜಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net