

ಬೇಲೂರು : ಮಹನೀಯರ ಆದರ್ಶ, ತತ್ವಗಳನ್ನು ಇತ್ತೀಚೆಗೆ ಮರೆಯುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಹೇಳಿದರು.
ಪುರಸಭೆ ಹಾಗೂ ಜಾನಪದ ಸಾಹಿತ್ಯ ಪರಿಷತ್‌ನಿಂದ ಬುಧವಾರ ಪುರಸಭೆ ಆವರಣದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರೀ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹನೀಯರ ತತ್ವ, ಆದರ್ಶಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ದೇಶಕ್ಕೆ ಗಾಂಧೀಜಿ, ಲಾಲ್ ಬಹಾದೂರ್ ಶಾಸ್ತ್ರೀ ಕೊಡುಗೆ ಅಪಾರವಾಗಿದೆ ಎಂದರು.
ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಸಿದ್ದೇಗೌಡ ಮಾತನಾಡಿ, ಗಾಂಧೀಜಿ ಅವರು ಅಹಿಂಸೆ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಜೋರಾಡಿದ ಮಹಾನ್ ಚೇತನ. ಲಾಲ್ ಬಹಾದೂರ್ ಶಾಸ್ತ್ರಿ ಅವರು ಬಡತನದಲ್ಲಿ ಹುಟ್ಟಿದರೂ ಉತ್ತಮವಾಗಿ ಓದಿ ಈ ದೇಶದ ಪ್ರಧಾನಿಯಾಗಿ ಕೆಲಸ ಮಾಡಿದರು ಎಂದರು.
ತಹಸೀಲ್ದಾರ್ ಎಂ.ಮಮತಾ ಮಾತನಾಡಿದರು. ಪುರಸಭೆ ಉಪಾಧ್ಯಕ್ಷೆ ಉಷಾ, ಮುಖ್ಯಾಧಿಕಾರಿ ಸುಜಯ್ ಕುಮಾರ್, ಸದಸ್ಯರಾದ ಜಗದೀಶ್, ಜಮಾಲೂದ್ದೀನ್, ಅಕ್ರಂ ಷರೀಫ್, ರತ್ನ, ಜಮೀಲಾ, ಫಯಾಜ್ ಇತರರು ಇದ್ದರು.