ಗೊಂದಲ ಬೇಡ, ಒಟ್ಟಾಗಿ ಪಕ್ಷ ಸಂಘಟಿಸೋಣ

13ark2
Published on

ಹಾಸನ: ಕಾರ್ಯಕರ್ತರಲ್ಲಿ ಯಾವುದೇ ಗೊಂದಲಬೇಡ. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡೋಣ ಎಂದು ಕಾಂಗ್ರೆಸ್ ಮುಖಂಡ ಕೃಷ್ಣೆಗೌಡ ಕರೆ ನೀಡಿದರು.


ನಾನು ಹಿಂದೆಯೂ ಕಾಂಗ್ರೆಸ್ಸಿನಲ್ಲೆ ಇದ್ದೆ. ಸಿಎಂ, ಡಿಸಿಎಂ ಅವರು ಪಕ್ಷಕ್ಕೆ ಬನ್ನಿ ಎಂದು ಸ್ವಾಗತಿಸಿದರು. ಹಾಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಪಕ್ಷವನ್ನು ಬಲಪಡಿಸಲು ಶ್ರೀಧರ್‌ಗೌಡ ಮತ್ತು ನಾನು ಒಂದಾಗಿ ಸಾಗುತ್ತೇವೆ ಎಂದು ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಮುಖಂಡ ಶ್ರೀಧರ್‌ಗೌಡ ಮಾತನಾಡಿ, ಕೃಷ್ಣೆಗೌಡರು ಕಾಂಗ್ರೆಸ್ಸಿನ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ, ಈ ಹಿನ್ನೆಲೆ ಪಕ್ಷದ ಕಾರ್ಯಕರ್ತರೊಂದಿಗೆ ಅವರ ಕಚೇರಿಗೆ ತೆರಳಿ ಹೃದಯ ಪೂರ್ವಕವಾಗಿ ಸ್ವಾಗತಿಸಿದ್ದೇನೆ. ನಮ್ಮಿಬ್ಬರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಂದ್ರಶೇಖರ್ ಕರೆದು ಮಾತನಾಡಿಸಿ ಇಬ್ಬರು ಒಟ್ಟಿಗೆ ಹೋಗಬೇಕು.

ಪಕ್ಷವನ್ನು ಇನ್ನೂ ಸಂಘಟಿಸಬೇಕು ಎಂದು ಸೂಚನೆ ನೀಡಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ ನಾವಿಬ್ಬರು ಒಟ್ಟಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ದಿನೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net