

ಚಿಕ್ಕಮಗಳೂರು: ಲೈಂಗಿಕ ಅಲ್ಪಸಂಖ್ಯಾತರು ತಮ್ಮಲ್ಲಿರುವ ಹಿಂಜರಿಕೆಯನ್ನು ಬಿಟ್ಟು ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಲು ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಕರೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಸಂಗಮ ಸಂಸ್ಥೆಯಿAದ ಆಯೋಜಿಸಲಾಗಿದ್ದ ಕರ್ನಾಟಕ ಸ್ವಾಭಿಮಾನಿ ನಡೆಗೆಯ ಸಭಾ ಕಾರ್ಯಕ್ರಮವನ್ನು ಉz್ದೆÃಶಿಸಿ ಮಾತನಾಡಿದ ಅವರು, ಜನ ತಮ್ಮ ಬಗ್ಗೆ ತಪ್ಪು ತಿಳಿದುಕೊಳ್ಳುತ್ತಾರೆ ಎಂಬ ಹಿಂಜರಿಕೆ ಬೇಡ. ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಮುಕ್ತವಾಗಿ ಹೊರಹಾಕಿಕೊಂಡಾಗ ಮಾತ್ರ ಸ್ವತಂತ್ರವಾದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಹಿಂದೆ ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜ ಕಾಣುವ ದೃಷ್ಟಿಯೇ ಬೇರೆಯಾಗಿತ್ತು. ಆದರೆ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉz್ದÉÃಶದಿಂದ ಹಲವು ಯೋಜನೆಗಳನ್ನು ರೂಪಿಸಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಎಲ್ಲರಂತೆಯೇ ಬದುಕುವಂತಾಗಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರು ಸಮಾಜದಲ್ಲಿ ಇಂದು ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗೆ ವರದಿ ನೀಡಿದೆ. ಇದಲ್ಲದೆ ಲೈಂಗಿಕ ಅಲ್ಪಸಂಖ್ಯಾತರ ಉದ್ದಾರಕ್ಕಾಗಿ ಎಸ್ಸಿ, ಎಸ್ಟಿ, ಒಬಿಸಿ ಗೆ ನೀಡುವಂತೆ ಮೀಸಲಾತಿಯನ್ನು ನೀಡಲಾಗಿದೆ. ಇನ್ನು ಕರ್ನಾಟಕ ರಾಜ್ಯ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ಇಡೀ ದೇಶದಲ್ಲೇ ಮೊದಲ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡ ಒಂದರಷ್ಟು ಮೀಸಲಾತಿಯನ್ನು ನೀಡಿದೆ ಎಂದು ಮಾಹಿತಿ ನೀಡಿದರು.
ಜನಸಾಮಾನ್ಯರಂತೆ ಲೈಂಗಿಕ ಅಲ್ಪಸಂಖ್ಯಾತರಿಗೂ ಬದುಕುವ ಹಕ್ಕಿದೆ. ಶಿಕ್ಷಣ ಪಡೆಯುವ ಮೂಲಕ ಲೈಂಗಿಕ ಅಲ್ಪಸಂಖ್ಯಾತರು ಸಮಾಜದಲ್ಲಿ ಗೌರವ ಯುತ ಬದುಕನ್ನು ಕಟ್ಟಿಕೊಳ್ಳುವಂತಾಗಬೇಕು. ಹೀಗೆ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವ ಸಲುವಾಗಿ ತಮ್ಮಲ್ಲಿರುವ ಹಿಂಜರಿಕೆಯನ್ನು ಮೊದಲು ತೊಡೆದು ಹಾಕಬೇಕು ಎಂದು ಹೇಳಿದರು.
ಸಂಗಮ ಸಂಸ್ಥೆಯ ಕಾರ್ಯಕ್ರಮ ನಿರ್ದೇಶಕಿ ನಿಶಾ ಗೂಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಾನವ ಹಕ್ಕುಗಳ ಹೋರಾಟಗಾರ ಮನೋಹರ್ ಎಲವರ್ತಿ, ಸಂಗಮ ಸಂಸ್ಥೆ ಕಾರ್ಯಕಾರಿ ನಿರ್ದೇಶಕ ರಾಜೇಶ್ ಶ್ರೀನಿವಾಸ್, ಸಮ್ಮಿತ್ರ ಫೌಂಡೇಶನ್ ನ ಅಂಜು, ದಲಿತ ಸಂಘಟನೆಗಳ ಒಕ್ಕೂಟದ ಎಚ್.ಎಸ್. ಲಕ್ಷö್ಮಣ್, ಕನ್ನಡ ಸೇನೆಯ ಅನ್ವರ್, ಭೀಮ್ ಆರ್ಮಿಯ ಹೊನ್ನಪ್ಪ ಮತ್ತಿತರರಿದ್ದರು.