ವಿಜಯವಾಣಿ ಸುದ್ದಿಜಾಲ ಶಹಾಪುರ
ಕಾಂತರಾಜು ನೇತೃತ್ವದ ಸಮಿತಿ ನಡೆಸಿರುವ ಜಾತಿ ಜನಗಣತಿ ಯಾವುದೇ ಕಾರಣಕ್ಕೂ ರಾಜ್ಯಕಾಂಗ್ರೆಸ್ ಸರ್ಕಾರ ಜಾರಿ ಮಾಡಬಾರದೆಂದು ಬಿಜೆಪಿ ಮುಖಂಡ ಕರಣ ಸುಬೇದಾರ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ವೀರಶೈವ-ಲಿಂಗಾಯತ ಮಹಾಸಭಾ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಮಹಾಸಭಾರಾಷ್ಟಿçÃಯ ಅಧ್ಯP್ಷÀ, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಲಾಗಿದೆ.
ಕಳೆದ ೧೦ ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈP್ಷÀಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಧ ಮತ್ತು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈe್ಞÁನಿಕವಾಗಿ ಸಮೀಕ್ಷೆ ನಡೆಸಬೇಕು, ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು,ಕಾಂತರಾಜು ಅಧ್ಯP್ಷÀತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿ ಅವೈe್ಞÁನಿಕ ಮತ್ತು ಅಸಂವಿಧಾನಿಕವಾಗಿದ್ದರಿAದ ಸ್ವೀಕಾರಕ್ಕೆ ಆರ್ಹವಲ್ಲವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ವೀರಶೈವ-ಲಿಂಗಾಯತ ಎ¯್ಲÁ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಶಿಫಾರಸ್ಸು ಮಾಡಬೇಕು. ಈ ಎಲ್ಲ ವಿಷಯಗಳನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ನಿರ್ಲಕ್ಷÈಮಾಡಿದರೆ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದೆಂದು ಕರಣ ಸುಬೇದಾರ ಎಚ್ಚರಿಸಿದ್ದಾರೆ.
---