

ಕಂಪ್ಲಿ: ಕೂಸಿನ ಮನೆ ಸರ್ಕಾರದ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು ಯಶಸ್ವಿಗೊಳಿಸಲು ಕೂಸಿನ ಮನೆ ಸಮಿತಿಯ ಎಲ್ಲ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ನರೇಗಾ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹೇಳಿದರು.
ಇಲ್ಲಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕೂಸಿನ ಮನೆ ಮೇಲ್ವಿಚಾರಣೆ ಸಮಿತಿ ಸದಸ್ಯರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೂಸಿನ ಮನೆಯನ್ನು ಯಾರೂ ನಿರ್ಲಕ್ಷಿಸಬಾರದು. ನರೇಗಾ ಕೂಲಿ ಕಾರ್ಮಿಕರ ಮೂರು ವರ್ಷದ ಒಳಗಿನ ಮಕ್ಕಳ ಆರೈಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೂಸಿನ ಮನೆಯ ಉದ್ದೇಶ, ಗುರಿ ಮತ್ತು ಮೇಲ್ವಿಚಾರಣೆ ಸಮಿತಿ ಕರ್ತವ್ಯಗಳ ಕುರಿತು ಸಮಗ್ರ ಮಾಹಿತಿ ಕಾರ್ಯಾಗಾರದಲ್ಲಿ ನೀಡಲಾಗುವುದು. ಹಂಪಾದೇವನಹಳ್ಳಿ, ಸುಗ್ಗೇನಹಳ್ಳಿ, ನಂ.10ಮುದ್ದಾಪುರ, ದೇವಸಮುದ್ರ, ಸಣಾಪುರ, ನೆಲ್ಲೂಡಿ ಗ್ರಾಪಂ.ಸಮಿತಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ.
ಗ್ರಾಪಂ ಅಧ್ಯಕ್ಷೆ ಈರಮ್ಮ ಪೂಜಾರಿ, ಪಿಡಿಒ ಬೀರಲಿಂಗ, ಹನುಮಂತ, ತಾಲೂಕು ಸಂಯೋಜಕ ಹನುಮೇಶ ಇತರರಿದ್ದರು.