ಹೊಸ ಮದ್ಯದಂಗಡಿ ತೆರೆಯಬೇಡಿ, ಜನಜಾಗೃತಿ ವೇದಿಕೆಯಿಂದ ಸರ್ಕಾರಕ್ಕೆ ಮನವಿ

IMG-20230930-WA0035-1.jpg
Published on

ಹುಬ್ಬಳ್ಳಿ: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಮುಂದಾಗಿರುವ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯ ರಾಜಣ್ಣ ಕೊರವಿ ಆಗ್ರಹಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯಪಾನದಂತಹ ದುಶ್ಚಟದಿಂದ ಯುವಕರನ್ನು ದೂರ ಇಡಲು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ರಾಜ್ಯಾದ್ಯಂತ 6339 ಕಾರ್ಯಕ್ರಮಗಳನ್ನು ಏರ್ಪಡಿಸಿದೆ ಎಂದರು.

ಇಂತಹ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನೂತನವಾಗಿ 389 ಎಂಎಸ್ಐಎಲ್ ಮದ್ಯದಂಗಡಿ ತೆರೆಯಲು ನಿರ್ಧರಿಸಿರುವುದು ಖಂಡನೀಯ. ಅಕ್ಟೋಬರ್ 2ರೊಳಗೆ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ನಿಯೋಗ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು, ಆಗಲೂ ಕೇಳದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮೂರು ಸಾವಿರ ಜನಸಂಖ್ಯೆ ಇರುವ ಹಳ್ಳಿಗಳಲ್ಲಿಯೂ ಸೂಪರ್ ಮಾರ್ಕೆಟ್ನಲ್ಲಿ ಮದ್ಯದಂಗಡಿ ತೆರೆಯಲು ನಿರ್ಧರಿಸಿದೆ. ಈ ನಿರ್ಧಾರದಿಂದ ಅನೇಕ ಕುಟುಂಬಗಳು ಬೀದಿ ಪಾಲಾಗಲಿವೆ. ಜತೆಗೆ ಕರ್ನಾಟಕ ರಾಜ್ಯವು ತನ್ನ ನತೆ ಕಳೆದುಕೊಳ್ಳಲಿದೆ. ಸರ್ಕಾರ ಈ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ಆಗ್ರಹಿಸಿದರು.

ಅಬಕಾರಿ ಇಲಾಖೆ ಹತ್ತು ವರ್ಷಗಳ ಹಿಂದೆ ತಡೆ ನೀಡಿದ್ದ ಹೊಸ ಮದ್ಯ ಮಳಿಗೆಗಳಿಗೆ ಲೈಸನ್ಸ್ ವಿತರಣೆಗೆ ಸರ್ಕಾರ ನಿರ್ಧರಿಸಿ ಶಿಾರಸು ಮಾಡಿದೆ. ಈಗಾಗಲೇ ರಾಜ್ಯದಲ್ಲಿ 12,593 ಎಂಎಸ್ಐಎಲ್ ಮದ್ಯದಂಗಡಿಗಳಿವೆ. ಈಗ ಮತ್ತೆ ಹೊಸದಾಗಿ ತೆರೆಯಲು ಹೊರಟಿವುದು ಸರಿಯಲ್ಲ ಎಂದು ಹೇಳಿದರು.

ಜನ ಜಾಗೃತಿ ವೇದಿಕೆ ಜಿಲ್ಲಾಧ್ಯ ಸಂತೋಷ ಶೆಟ್ಟಿ, ವಸಂತ ಸಾಲ್ಯಾನ, ಪೀರಾಜಿ ಖಂಡೇಕರ, ತಾರಾದೇವಿ ವಾಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net