ಮಾದಕ ವಸ್ತುಗಳನ್ನು ಸೇವಿಸದಿರಿ

h9-jabin college
Published on

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹುಬ್ಬಳ್ಳಿ ತಾಲೂಕು ಕಾನೂನು ಸೇವಾ ಸಮಿತಿ, ಹುಬ್ಬಳ್ಳಿ ವಕೀಲರ ಸಂಘದ ಸಹಯೋಗದಲ್ಲಿ ಇಲ್ಲಿಯ ವಿದ್ಯಾನಗರದ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ಏರ್ಪಡಿಸಲಾಗಿತ್ತು.

ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ ಯಮಕನಮರಡಿ ಉದ್ಘಾಟಿಸಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಾರ್ಕೋಟಿಕ್ಸ್ ಕಾಯ್ದೆ 1986 ಪ್ರಕಾರ ಮಾದಕ ವಸ್ತುಗಳ ಸೇವಿಸಿದವರಿಗೆ 20 ವರ್ಷ ಜೈಲು ಶಿಕ್ಷೆ ಇದೆ. ಇವುಗಳಿಂದ ದೂರವಿದ್ದು ತಮ್ಮ ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಅಭಿರಕ್ಷಕ ಮಯೂರ ಎಂ. ನಟೇಕರ್ ಮಾತನಾಡಿ, ಮಾದಕ ವ್ಯಸನಕ್ಕೆ ತಾತ್ಕಾಲಿಕ ಸಂತೋಷವಿದೆ. ತೀವ್ರವಾಗಿ ಬಳಕೆ ಮಾಡಿದರೆ ಜೀವಕ್ಕೆ ಆಪತ್ತು ಎದುರಾಗಲಿದೆ. ಮಾದಕ ವಸ್ತುಗಳನ್ನು ಬೇರು ಸಮೇತ ತೆಗೆದುಹಾಕಸಬೇಕು ಎದರು.

ಪ್ರಾಚಾರ್ಯೆ ಡಾ. ಸಂಧ್ಯಾ ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಯಂತ ಗೌಳಿ ಉಪಸ್ಥಿತರಿದ್ದರು.

ಸೃಷ್ಟಿ ಸಾಲಿಮಠ ಪ್ರಾರ್ಥಿಸಿದರು. ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ವಿ.ಆರ್. ವಾಘಮೋಡಿ ಸ್ವಾಗತಿಸಿದರು. ಉಪನ್ಯಾಸಕಿ ಸವಿತಾ ಎಸ್.ಎಚ್. ನಿರೂಪಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net