ಡೆಂಘೆ ಬಗ್ಗೆ ಆತಂಕ ಬೇಡ

12 ckm 10
ಚಿಕ್ಕಮಗಳೂರಿನಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ್ ಅಮಟೆ, ಜಿಪಂ ಸಿಇಒ ಡಾ.ಗೋಪಾಲಕೃಷ್ಣ, ಡಿಎಚ್‌ಒ ಡಾ. ಅಶ್ವಥ್ ಬಾಬು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
Published on

ಚಿಕ್ಕಮಗಳೂರು: ಡೆಂಘೆ ನಿಯಂತ್ರಣಕ್ಕೆ ಜಿಲ್ಲಾ ಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳ ವೈದ್ಯರುಗಳು ಸಿದ್ದತೆ ನಡೆಸಿದ್ದು ಮೆಡಿಸಿನ್‌ಗೆ ಯಾವುದೇ ಕೊರತೆಯಿಲ್ಲ. ಡೆಂಘೆ ಬಗ್ಗೆ ಜನರು ಅನಗತ್ಯ ಆತಂಕಪಡಬೇಕಿಲ್ಲ ಎಂದು ಜಿಲ್ಲಾಧಿ ಕಾರಿ ಮೀನಾ ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆಗೆ ಬುಧವಾರ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ಮೊದಲ ವಾರದಿಂದ ಚಿಕ್ಕಮಗಳೂರು ನಗರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಘೆ ಪ್ರಕರಣಗಳು ಕಂಡು ಬಂದಿವೆ. ಜೂನ್‌ನಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಡೆಂಘೆ ಪ್ರಕರಣಗಳು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಜೂನ್ ಮೊದಲ ವಾರದಲ್ಲಿ ೪೯ ರೋಗಿಗಳು ಒಳ ರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ೩೫ ರೋಗಿಗಳು ಮಳೆಗಾಲವಾಗಿರುವ ಕಾರಣ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಎಂದರು.
ಈ ಎಲ್ಲಾ ರೋಗಿಗಳಿಗೆ ಸಕಾಲಕ್ಕೆ ಸೂಕ್ತ ಪರೀಕ್ಷೆ ಮಾಡಲಾಗಿದೆ. ರೋಗಕ್ಕೆ ತಕ್ಕಂತೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ೫೦ ಪ್ರಕರಣಗಳು ಹೆಚ್ಚು ಕಂಡು ಬಂದಿವೆ. ಇದರ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರಸಭೆ ಆಯುಕ್ತರ ನೇತೃತ್ವದಲ್ಲಿ ನಗರಾದ್ಯಂತ ಫಾಗಿಂಗ್ ಸೇರಿದಂತೆ ಲಾರ್ವಾಗಳ ಸರ್ವೆ ನಡೆಸಿ ನಾಶಕ್ಕೆ ಕ್ರಮ ವಹಿಸಲಾಗಿದೆ. ಈ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲು ಸೂಚಿಸಿz್ದೆÃನೆ. ೨-೩ ವಾರಗಳ ಕಾಲ ನಗರಸಭೆ ಕ್ಷೀಪ್ರಕಾರ್ಯಾಚರಣೆ ನಡೆಸಿ ಲಾರ್ವಾಗಳ ನಾಶಕ್ಕೆ ಮುಂದಾಗಲಿದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕಪಡುವುದು ಬೇಡ ಎಂದು ತಿಳಿಸಿದರು.
ಜನರು ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ನೀರು ಸಂಗ್ರಹಿಸುವ ಪಾತ್ರೆಗಳನ್ನು ಪ್ರತಿನಿತ್ಯ ಸ್ವಚ್ಚಗೊಳಿಸಿ ಹೊಸ ನೀರು ತುಂಬಿಸಿಕೊಳ್ಳಲು ಮುಂದಾಗ ಬೇಕು ಎಂದು ಸಲಹೆ ನೀಡಿದರು.
ಮನೆ, ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ನೀರು ನಿಲ್ಲದಂತೆ ಚರಂಡಿಗ ಳನ್ನು ಸ್ವಚ್ಚವಾಗಿಟ್ಟುಕೊಳ್ಳುವುದರ ಜೊತೆಗೆ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ ಬಾಬು ಮಾತನಾಡಿ ಜೂ ೧ರಿಂದ ಇಂದಿನವರೆಗೆ ೧೫೦ ಡೆಂಘೆ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ೪೯ ಪ್ರಕರಣಗಳು ಮಾತ್ರ ಸಕ್ರಿಯ ಪ್ರಕರಣಗಳಾಗಿದ್ದು, ಉಳಿದ ರೋಗಿಗಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಡೆಂಘೆ ನಿಯಂತ್ರಣಕ್ಕೆ ಇಲಾಖೆ ಸಿಬ್ಬಂದಿ ಜೊತೆಗೆ ಖಾಸಗೀ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿ ಗಳನ್ನು ಬಳಸಿಕೊಂಡು ಲಾರ್ವಾಗಳ ಸಮೀಕ್ಷೆ ನಡೆಸಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜೂನ್ ಮತ್ತು ಜು ಲೈ ತಿಂಗಳಿನಲ್ಲಿ ಡೆಂಘೆ ಪ್ರಕರಣ ಕಾಣಿಸಿಕೊಳ್ಳುವುದು ಸರ್ವೆ ಸಾಮಾ ನ್ಯವಾಗಿದ್ದು, ನಂತರ ಕ್ರಮೇಣ ಕಡಿಮೆಯಾಗುತ್ತದೆ ಎಂದರು.
ನಗರದ ರಾಮನಹಳ್ಳಿ, ಗೌರಿಕಾಲುವೆ, ಇಂದಾವರ ಸೇರಿದಂತೆ ಮಲೆನಾಡು ಭಾಗದ ಕೆಲವು ಪ್ರದೇಶಗಳಿಂದ ಡೆಂಘೆ ಪೀಡಿತರು ಆಸ್ಪತ್ರೆಗೆ ದಾಖಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗ್ಗೆ ಕಚ್ಚುವ ಸೊಳ್ಳೆಗಳಿಂದ ಆದಷ್ಟು ದೂರ ಇದ್ದರೆ ಡೆಂಘೆಯಿAದ ಪಾರಾಗಬಹುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಪಿ ವಿಕ್ರಮ್ ಅಮಟೆ, ಜಿಪಂ ಸಿಇಒ ಡಾ.ಬಿ.ಗೋಪಾಲಕೃಷ್ಣ, ಜಿಲ್ಲಾಸ್ಪತ್ರೆ ಮೆಡಿಕಲ್ ಸರ್ಜನ್ ಡಾ. ಮೋಹನ್‌ಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net