

ಬಂಗಾರಪೇಟೆ: ಪೊಲೀಸ್ ಇಲಾಖೆಯಿಂದ ಅಪರಾಧ ಪ್ರಕರಣಗಳ ವಿರುದ್ಧ ಜಾಗೃತಿ ಮೂಡಿಸಲು "ಮನೆ ಮನೆ ಅರಿವು' ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಂಗಾರಪೇಟೆ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಗ್ರಾಮಸಭೆಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಪೊಲೀಸ್ ಇಲಾಖೆ ಕರಪತ್ರ ನೀಡಿ ಜಾಗೃತರನ್ನಾಗಿಸುತ್ತಿದ್ದಾರೆ. ಕಳ್ಳತನ, ಸೈಬರ್ ವಂಚನೆ, ಮಹಿಳೆಯರ ಮೇಲೆ ದೌರ್ಜನ್ಯ, ಸರಗಳವು ಹಾಗೂ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಮೋಸ ಹೋಗದಂತೆ ಎಚ್ಚರವಹಿಸುವ ಕೆಲಸ ಮಾಡುತ್ತಿದ್ದಾರೆ.
ಸಬ್ ಇನ್ಸ್ಪೆಕ್ಟರ್ ರಾಜಣ್ಣ, ಪೊಲೀಸ್ ಇನ್ಸ್ಪೆಕ್ಟರ್ ಆರ್.ದಯಾನಂದ್ ನೇತೃತ್ವದ ತಂಡ ಸಾರ್ವಜನಿಕರ ಹಿತದೃಷ್ಟಿಯಿಂದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕೈಗೊಂಡಿರುವ ಕಾರ್ಯಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.