

ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮಟ್ಟದಲ್ಲಿ ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬೂತ್ ಸಂಖ್ಯೆ ೨೦೩ ಹಾಗೂ ೨೦೪ರಲ್ಲಿ ಬೂತ್ ಅಧ್ಯಕ್ಷ ಹಸೈನ್ ಹಾಗೂ ಎಂ.ಎಂ.ಯಾಕುಬ್ ಮುಂದಾಳತ್ವದಲ್ಲಿ ತ್ಯಾಗರಾಜ ನಗರದ ಮನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಕಾಂಗ್ರೆಸ್‌ನ ಮೊದಲ ಗ್ಯಾರಂಟಿ ಕಾರ್ಡ್ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ೨೦೦ ಯೂನಿಟ್ ಉಚಿತ ಪೂರೈಕೆ, ೨ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ ೨ ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಯೋಜನೆ ಜಾರಿ ಮತ್ತು ೩ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‌ದಾರರಿಗೆ ೧೦ ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್‌ನ್ನು ಮನೆ ಮನೆಗೆ ವಿತರಿಸಿದರು.
ಈ ಸಂದರ್ಭ ಕೆಪಿಸಿಸಿ ಮಾದ್ಯಮ ಸಂವಹನ ವಕ್ತಾರರು ಹಾಗೂ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.