ಮನೆಮನೆಗೆ ಗ್ಯಾರಂಟಿ ಕಾರ್ಡ್ ವಿತರಣೆ

19adarshkdga2
Published on

ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ಮನೆಮನೆಗೆ ಇತ್ತೀಚೆಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.


ಬೂತ್ ನಂಬರ್ ೨೧೨ರ ಅಧ್ಯಕ್ಷ ಹಫೀಜ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಮೊದಲ ಗ್ಯಾರಂಟಿ ಕಾರ್ಡ್ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ೨೦೦ ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ೨ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ ೨ ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಯೋಜನೆ ಜಾರಿ ಮತ್ತು ೩ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‌ದಾರರಿಗೆ ೧೦ ಕೆ.ಜಿ.ಅಕ್ಕಿ ಉಚಿತವಾಗಿ ನೀಡುವುದಾಗಿ ಪ್ರಮುಖರು ಮತದಾರರಿಗೆ ಭರವಸೆ ನೀಡಿದರು.


ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಸಂಘಟನಾ ಕಾರ್ಯದರ್ಶಿ ಎಂ.ಎನ್.ರವುಫ್, ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯದರ್ಶಿ ಕೌಸರ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಖಜಾಂಜಿ ಅಜೀಜ್, ಬೂತ್ ಪ್ರಮುಖ ಹಮೀದ್, ಸೇವಾದಳದ ಹಬೀಬ್, ಹಿರಿಯ ಕಾಂಗ್ರೆಸ್ ಮುಖಂಡ ನಿಸಾರ್ ಅಹ್ಮದ್ ಹಾಗೂ ನಿರಂಜನ್ ಕ್ಸೇವಿಯರ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net