

ಸಿದ್ದಾಪುರ: ಕೊಡಗು ವೈದ್ಯಕೀಯ ಮಹಾವಿದ್ಯಾಲಯದ ಎಥಿಕ್ಸ್ ಸಮಿತಿ ಅಧ್ಯಕ್ಷರನ್ನಾಗಿ ಪಾಲಿಬೆಟ್ಟದ ಡಾ.ಎ.ಸಿ ಗಣಪತಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಕಾವೇರಿ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಸಮಾಜ ಸೇವಕರಾಗಿರುವ ಇವರನ್ನು ಮುಂದಿನ ಎರಡು ವರ್ಷದ ಅವಧಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಕೈಗೊಳ್ಳುವ ಸಂಶೋಧನೆ ಮತ್ತು ಅಧ್ಯಯನಗಳ ನಿಯಂತ್ರಣ ಮತ್ತು ಮೇಲ್ವಿಚಾರಣೆ ನಿರ್ವಹಿಸುವ ಸಲುವಾಗಿ 13 ಸದಸ್ಯ ತಂಡವನ್ನು ರಚಿಸಲಾಗಿದೆ.