ಡಾ.ಅಬ್ದುಲ್ಲಾ ಅವರಿಗೆ ವೈದ್ಯಶ್ರೀ ಪ್ರಶಸ್ತಿ

Published on

ಬಳ್ಳಾರಿ : ವಿಜಯಪುರದಲ್ಲಿ ಜರುಗಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 31ನೇ ರಾಜ್ಯ ಸಮ್ಮೇಳನದಲ್ಲಿ ಜಿಲ್ಲೆಯ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ ಅವರಿಗೆ ವೈದ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿ, ತಾಲೂಕ ಆರೋಗ್ಯ ಅಧಿಕಾರಿ, ಜಿಲ್ಲಾ ಆರ್.ಸಿ.ಎಚ್ ಸೇವೆ ಸಲ್ಲಿಸಿ ಹಾಗೂ ಪ್ರಸ್ತುತ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ವೈದ್ಯಶ್ರೀ ಪ್ರಶಸ್ತಿಯನ್ನು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net