ಡಾ.ಅಂಬೇಡ್ಕರ್ ಆದರ್ಶಗಳ ಪಾಲಿಸಿ

manvi democrasy
ಮಾನ್ವಿ ತಾಪಂ ಸಭಾಂಗಣದಲ್ಲಿ ಗುರವಾರ ಪ್ರಜಾಪ್ರಭುತ್ವ ದಿನದ ಅಂಗವಾಗಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಮಾತನಾಡಿದರು. ಪ್ರಮುಖರಾದ ಶಿವಕುಮಾರ ಮ್ಯಾಗಳಮನೆ ವಕೀಲ, ಹನುಮಂತ ಸೀಕಲ್, ಷಣ್ಮುಖಪ್ಪ ನೀರಮಾನ್ವಿ ಇದ್ದರು.
Published on

ಮಾನ್ವಿ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು, ಯುವಕರು ಪಾಲಿಸಿದಾಗ ಮಾತ್ರ ದೇಶದ ಏಳಿಗೆಯಾಗಲು ಸಾಧ್ಯ ಎಂದು ತಹಸೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಸದೃಢ ಭಾರತ ಕಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಕೂಡ ಸಂವಿಧಾನದಲ್ಲಿ ಸಮಾನವಾದ ಅವಕಾಶಗಳನ್ನು ನೀಡಲಾಗಿದೆ. ವಿದ್ಯಾರ್ಥಿನಿಯರು ಉನ್ನತವಾದ ಗುರಿ ಇಟ್ಟುಕೊಂಡು ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದರು. ಸಂಪನ್ಮೂಲ ವ್ಯಕ್ತಿ ಶಿವಕುಮಾರ ಮ್ಯಾಗಳಮನೆ ವಕೀಲ ಉಪನ್ಯಾಸ ನೀಡಿದರು.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಟರಾಜ, ಹೈದರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ. ಮಲ್ಲೇಶ ಮಾಚನೂರು, ಹನುಮಂತ ಬ್ಯಾಗವಾಟ, ಹನುಮಂತ ಸೀಕಲ್, ಷಣ್ಮುಖಪ್ಪ ನೀರಮಾನ್ವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net