ವಿಜಯಪುರಕ್ಕೆ ಡಾ.ಆನಂದ ಕೆ ನೂತನ ಡಿಸಿ, ಟಿ.ಭೂಬಾಲನ್ ಎಲ್ಲಿಗೆ?

vjp DC Office and dc
Published on

ವಿಜಯಪುರ: ಕಳೆದ ಎರಡು ವರ್ಷಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಟಿ.ಭೂಬಾಲನ್ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ ಕೆ ನೇಮಕಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಆನಂದ ಕೆ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯನ್ನಾಗಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ಒಟ್ಟು ಎಂಟು ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು, ಅದರಲ್ಲಿ ವಿಜಯಪುರ ಜಿಲ್ಲೆಗೆ ಡಾ.ಆನಂದ ಕೆ ಅವರನ್ನು ನೇಮಕ ಮಾಡಿದರೆ, ಟಿ.ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಿಇಒ ಆಗಿ ನೇಮಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net