ಉಪ ಯೋಜನಾ ಕಾರ್ಯಕ್ರಮ ಪ್ರಗತಿಗೆ ಡಾ.ಬಿ.ಸಿ.ಸತೀಶ ಸೂಚನೆ

29adarshkdga5
Published on

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನಿಗಧಿಪಡಿಸಿರುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಫಲಾನುಭವಿಗಳ ಆಯ್ಕೆ ಮಾಡಿಕೊಳ್ಳುವುದು, ಹಣ ಬಿಡುಗಡೆಯಾದ ನಂತರ ಕಾರ್ಯಕ್ರಮ ಅನುಷ್ಠಾನ ಮತ್ತಿತರ ಬಗ್ಗೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.


ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೆಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಮಂಜುನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಕಾರ್ಮಿಕ ಇಲಾಖಾ ಅಧಿಕಾರಿ ಅನಿಲ್ ಬಗಟಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗೌರಿ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ, ಸೆಸ್ಕ್ ಎಇಇ ದೇವಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net