ಪ್ರಾಂಶುಪಾಲರಾಗಿ ಡಾ.ಬಿ.ರಾಘವ ನೇಮಕ

B.Raghava
Published on

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನೂತನ ಪ್ರಭಾರ ಪ್ರಾಂಶುಪಾಲರಾಗಿ ಮೇಜರ್ ಡಾ.ಬಿ.ರಾಘವರನ್ನು ನೇಮಕ ಮಾಡಿ ಮಂಗಳೂರು ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.


ಹಿಂದಿನ ಪ್ರಭಾರ ಪ್ರಾಂಶುಪಾಲರಾದ ಡಾ.ಸಿ.ಜಗತ್ ತಿಮ್ಮಯ್ಯರವರು ಡಿ.೩೧ರಂದು ಸ್ವಯಂ ನಿವೃತ್ತಿಯಾಗಿದ್ದರಿಂದ ತೆರವಾದ ಸ್ಥಾನಕ್ಕೆ ಇವರನ್ನು ನೇಮಕಮಾಡಲಾಗಿದೆ. ಮೇಜರ್ ಡಾ. ರಾಘವರವರು ಇಪ್ಪತ್ತೆಂಟು ವರ್ಷ ಸೇವಾನುಭ ಹೊಂದಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಲೇಖನಗಳನ್ನು ಮಂಡಿಸಿರುತ್ತಾರೆ.


ಎನ್‌ಸಿಸಿ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಮುಖ್ಯಮಂತ್ರಿ ಪದಕ ಮತ್ತು ಪ್ರಶಸ್ತಿ ಸೇರಿದಂತೆ ರಾಷ್ಟ್ರಮಟ್ಟದ ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳಿಗೆ ಬಾಜನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net