

ವಿಜಯವಾಣಿ ಸುದ್ದಿಜಾಲ ಉಡುಪಿ
ಉಡುಪಿಯ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನ ಇತಿಹಾಸ ವಿಭಾಗ, ಹೆರಿಟೇಜ್ ಕ್ಲಬ್ ಹಾಗೂ ವಿದ್ಯಾರ್ಥಿ ವೇದಿಕೆಯ ಆಶ್ರಯದಲ್ಲಿ ಇತಿಹಾಸತಜ್ಞ ಡಾ. ಬಿ.ವಸಂತ ಶೆಟ್ಟಿ ಸ್ಮರಣಾರ್ಥ ಬುಧವಾರ (ಅ.8) ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಆರ್ಆರ್ಸಿ ಉಡುಪಿಯ ಸಹಸಂಶೋಧಕ ಡಾ. ಅರುಣ ಎಸ್.ಆರ್. ಅವರು ಇತಿಹಾಸದ ಅಧ್ಯಯನದಲ್ಲಿ ಜಾನಪದ ಆಕರಗಳು ವಿಷಯ ಕುರಿತು ಉಪನ್ಯಾಸ ನೀಡಿದರು.
ಮಾಹೆಯ ಸಾಂಸ್ಕೃತಿಕ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ.ಜಗದೀಶ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಮಹೇಶ ಶೆಟ್ಟಿ ಸ್ವಾಗತಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿ ವೇದಿಕೆಯ ಸಂಯೋಜಕ ಡಾ. ಶಿವಕುಮಾರ ಅಳಗೋಡು ವಂದಿಸಿದರು.
ವಿದ್ಯಾರ್ಥಿನಿಯರಾದ ಯಶಸ್ವಿ ಹಾಗೂ ಸಿಂಧು ಹೆಗಡೆ ಕಾರ್ಯಕ್ರಮ ನಿರೂಪಿಸಿದರು.