ಕೃಷಿ ವಿವಿ ನಿವೃತ್ತ ಮುಖ್ಯ ವೈದ್ಯಾಧಿಕಾರಿ ಡಾ. ಬೈರಪ್ಪ ನಿಧನ

byrap
Published on

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆಸ್ಪತ್ರೆಯ ನಿವೃತ್ತ ಮುಖ್ಯ ವೈದ್ಯಾಧಿಕಾರಿ ಡಾ. ಬೈರಪ್ಪ (90) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

ಮೃತರಿಗೆ ಒರ್ವ ಪುತ್ರ, ಒರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ 3 ಗಂಟೆಗೆ ಅವರ ಹುಟ್ಟೂರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಖಾಜಿಹೊಸಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪಾರ್ಥಿವ ಶರೀರವನ್ನು ಶನಿವಾರ ಬೆಳಿಗ್ಗೆ 7 ರಿಂದ 10.30ರವರೆಗೆ ನಂ.189, 6ನೇ ಮುಖ್ಯರಸ್ತೆ, ಯಲಹಂಕ ಉಪನಗರದಲ್ಲಿರುವ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net