ಡಾ.ಬಾಲಗಂಗಾಧರನಾಥ ಮಹಾಸ್ವಾಮಿಯ 12ನೇ ವರ್ಷದ ಪುಣ್ಯಾರಾಧನೆ

balagangadharanatha
Published on

ಹಾಸನ: ಭೈರವೈಕ್ಯ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಯವರ 12ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವು ಜ.13 ರ ಸೋಮವಾರ ನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನೆರವೇರಿತು.

ಸೋಮವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಮಹಾಗಣಪತಿಗೆ ಅಭಿಷೇಕ, ರಜತ ಕವಚಾಲಂಕಾರ, ಲಲಿತ ಸಹಸ್ತ್ರನಾಮ, ಭಜನೆ, ಭಕ್ತಿಭಾವ ಸಂಗಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಮಾಡಲಾಯಿತು.

ಮಧ್ಯಾಹ್ನ 2ಗಂಟೆಯಿಂದ ಸಂಜೆ 6ಗಂಟೆವರೆಗೂ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನೆ ಹಾಗೂ ಸಂಜೆ 5ಗಂಟೆಗೆ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಯವರ ಪುತ್ಥಳಿಯ ಮುತ್ತಿನ ಪಲ್ಲಕಿ ಉತ್ಸವ ಹಾಗೂ ದಿವ್ಯ ಜ್ಯೋತಿಯೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಭಕ್ತಿಯ ಮೆರವಣಿಗೆ ನಡೆದು ಶ್ರೀ ಮಠದ ಆವರಣದಲ್ಲಿ ಸಂಪನ್ನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net